ಕುಡಿಯುವ ನೀರಿನ ಘಟಕ ಸರಿಪಡಿಸಿ

22M.D.R.2
Published on
  • ಮದ್ದೂರು: ತಾಲೂಕಿನ ಕೊಪ್ಪ ಗ್ರಾಮದ ಅಂಬೇಡ್ಕರ್ ಭವನದ ಮುಂದೆ ಇರುವ ಶುದ್ಧ ಕುಡಿಯುವ ನೀರಿನ ಘಟಕಸರಿಪಡಿಸಲು ಒತ್ತಾಯಿಸಿ ಕ್ರಾಂತಿಕಾರಿ ಕನ್ನಡಿಗರ ವೇದಿಕೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹಲವು ದಿನಗಳಾಗಿದ್ದರೂ ಅಧಿಕಾರಿಗಳು ಸರಿಪಡಿಸಿಲ್ಲ. ಹಾಗಾಗಿ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ ಎಂದು ವೇದಿಕೆ ಮುಖಂಡರು ದೂರಿದರು.ವೇದಿಕೆಯ ಸಂಸ್ಥಾಪಕ ನಿರ್ದೇಶಕ ಮಹಮ್ಮದ್ ಜಬಿವುಲ್ಲಾ ಮಾತನಾಡಿ, ನೀರಿನ ಘಟಕ ಸರಿಪಡಿಸದಿದ್ದರೆ ವೇದಿಕೆ ವತಿಯಿಂದ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವೇದಿಕೆ ಜಿಲ್ಲಾ ಉಪಾಧ್ಯಕ್ಷ ಅನಿಲ್, ಹೋಬಳಿ ಘಟಕದ ಅಧ್ಯಕ್ಷ ಗಿರೀಶ್, ಮುಖಂಡರಾದ ಶ್ರೀನಿವಾಸ್, ಮನು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net