ನಾನೂ ಡಿ.ಕೆ.ಶಿವಕುಮಾರ್ ಒಟ್ಟಿಗಿದ್ದೇವೆ, ನಮ್ಮ ಮಧ್ಯೆ ಬಿರುಕಿಲ್ಲ: ಸಿದ್ದರಾಮಯ್ಯ

Siddaramaiah
Published on

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನ ಪ್ರಯುಕ್ತ ದಾವಣಗೆರೆಯಲ್ಲಿ ಇಂದು ಸಿದ್ದರಾಮೋತ್ಸವ ನಡೆದಿದ್ದು, ಈ ಸಂದರ್ಭದಲ್ಲಿ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.

ರಾಹುಲ್ ಗಾಂಧಿ ಅವರು ವಿಶೇಷ ಪ್ರೀತಿ ಇಟ್ಟು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಐದು ವರ್ಷ ಆಡಳಿತ ನಡೆಸಲು ಸೋನಿಯಾ, ರಾಹುಲ್ ಗಾಂಧಿ ಸಹಕಾರ ಕೊಟ್ಟರು. ಎಲ್ಲಿಯವರೆಗೆ ನಾನು ಸದೃಢವಾಗಿ ಇರುತ್ತೇನೋ ಅಲ್ಲಿಯವರೆಗೆ ನಿಮ್ಮ ಸೇವೆ ಮಾಡಲು ರಾಜಕೀಯದಲ್ಲಿ ಇರುತ್ತೇನೆ ಎಂದು ಅವರು ತಿಳಿಸಿದರು.

ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಬಿರುಕಿದೆ ಎಂಬುದು ತಪ್ಪು ಮಾಹಿತಿ. ನಾನು ಹಾಗೂ ಡಿ.ಕೆ.ಶಿವಕುಮಾರ್ ಒಟ್ಟಿಗಿದ್ದೇವೆ, ನಮ್ಮ ಮಧ್ಯೆ ಬಿರುಕಿಲ್ಲ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಗುರಿ, ಅದಕ್ಕಾಗಿ ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದ ಸಿದ್ದರಾಮಯ್ಯ, ಮತ್ತೆ ಕಾಂಗ್ರೆಸ್ ಸರ್ಕಾರ ತರುತ್ತೇವೆ ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net