ದುಸ್ಥಿತಿಯಲ್ಲಿರುವ ಕಟ್ಟಡಗಳ ಮರು ನಿರ್ಮಾಣಕ್ಕೆ ಕ್ರಮ

18-02-2020 ALRp01
Published on

ಆಲೂರು: ತಾಲೂಕು ವ್ಯಾಪ್ತಿಯ ಹಲವು ಶಾಲಾ ಹಾಗೂ ಕಾಲೇಜು ಕಟ್ಟಡಗಳು ದುಸ್ಥಿಯಲ್ಲಿದ್ದು, ಅವುಗಳನ್ನು ಮರು ನಿರ್ಮಾಣ ಹಾಗೂ ದುರಸ್ತಿ ಮಾಡಲಾಗುವುದು ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿಗೆ 1. 30 ಕೋಟಿ ರೂ.ಬಿಡುಗಡೆಯಾಗಿದ್ದು, ಅದರಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ 2 ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಉಳಿದ 1 ಕೋಟಿ ರೂ.ಗೆ ಟೆಂಡರ್ ಪ್ರಕ್ರಿಯೆಯಲ್ಲಿದೆ. ಅದು ಮುಗಿದ ನಂತರ ಇತರ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲೆ ಪೂರ್ಣಿಮಾ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net