ಕೆಂಪುಕಲ್ಲು ಕ್ವಾರಿ ಸಮಸ್ಯೆ ಪರಿಹರಿಸಲು ಕ್ರಮ

Ksd_problem
Published on

ಕಾಸರಗೋಡು: ಜರ್ಮನ್ ಅನುದಾನಿತ ತ್ಯಾಜ್ಯ ನಿರ್ವಹಣಾ ಕಂಪನಿ ಉದ್ಘಾಟನೆ ಜಿಲ್ಲೆಯಲ್ಲಿ ಕೈಗಾರಿಕಾ ವಲಯ ಅಭಿವೃದ್ಧಿ ಪಥದತ್ತ ಸಾಗುತ್ತಿರುವುದನ್ನು ಸಾಬೀತುಪಡಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ಕೆಂಪುಕಲ್ಲು ಕ್ವಾರಿ ಕ್ಷೇತ್ರವೂ ಪ್ರಮುಖ ಪಾತ್ರ ವಹಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಪಿ. ರಾಜೀವನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೆಂಪುಕಲ್ಲು ಕಾರ್ಮಿಕರ ಸಮಸ್ಯೆ ಬಗ್ಗೆ ಚರ್ಚಿಸಲು ಇತ್ತೀಚೆಗೆ ಆಯೋಜಿಸಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಸಿ.ಎಚ್.ಕುಞಂಬು, ಎ.ಕೆ.ಎಂ.ಅಶ್ರಫ್, ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್, ಜಿಎಸ್‌ಐ ಪ್ರತಿನಿಧಿ ಡಾ.ಅಂಬಿಲಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕ ಡಾ.ಹರಿಕುಮಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್, ಉಪಾಧ್ಯಕ್ಷ ಶಾನವಾಜ್ ಪಾದೂರು, ಎಣ್ಮಕಜೆ ಗ್ರಾಪಂ ಅಧ್ಯಕ್ಷ ಎಸ್.ಸೋಮಶೇಖರ, ಪ್ರಧಾನ ಕಾರ್ಯದರ್ಶಿ ಪಿ.ಎಂ.ಮಹಮ್ಮದ್ ಹನೀಷ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net