ಸಾರ್ವಜನಿಕ ಸ್ಥಳದಲ್ಲಿ ಮಾಂಸ ತ್ಯಾಜ್ಯ ಎಸೆತ - ಕಠಿಣ ಕ್ರಮಕ್ಕೆ ಆಗ್ರಹ

PTR_20 OCT_1
Published on

ವಿಟ್ಲ: ಮಾಂಸ ಮಾಡಿ ಉಳಿದ ತ್ಯಾಜ್ಯವನ್ನು ರಸ್ತೆಯ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಕಿಗೆ ಬಂದಿದೆ.

ಕಲ್ಲಡ್ಕ - ವಿಟ್ಲ ರಸ್ತೆಯ ಮಧ್ಯ ಭಾಗದ ಕೆಲಿಂಜ ಎಂಬಲ್ಲಿ ಬಸ್ ನಿಲ್ದಾಣದ ಬಳಿ ರಸ್ತೆಯ ಬದಿಯಲ್ಲಿ ಪ್ರಾಣಿಯ ದೇಹದ ಬೇರೆ ಬೇರೆ ಭಾಗವನ್ನು ಎಸೆದು ಹೋದ ಬಗ್ಗೆ ಸ್ಥಳೀಯರು ಗ್ರಾ. ಪಂ. ಸದಸ್ಯರಿಗೆ ಮಾಹಿತಿ ನೀಡಿದ್ದು, ಅವರು ವಿಟ್ಲ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಟ್ಲ ಪೋಲಿಸರು ಬೇಟಿ ನೀಡಿ ತ್ಯಾಜ್ಯ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೇಲ್ನೋಟಕ್ಕೆ ದನಗಳ ಕೈ ಕಾಲು, ಚರ್ಮ, ಹಲ್ಲು, ತಲೆಯ ಭಾಗದಂತೆ ಕಂಡು ಬಂದಿದ್ದು, ಹೆಚ್ಚಿನ ಮಾಹಿತಿಯನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ. ಈ ಸ್ಥಳದಲ್ಲಿ ಹಲವು ಬಾರಿ ಎಸೆದು ಹೋಗಿರುವ ಪ್ರಸಂಗವಾಗಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ಮಾಂಸ ಮಾಡುವ ಕಸಾಯಿ ಖಾನೆ ಈ ಭಾಗದಲ್ಲಿ ಕಾರ್ಯ ನಿವರ್ಹಿಸುತ್ತಿದೆಯಾ ಎಂಬ ಬಗ್ಗೆ ಪತ್ತೆ ಮಾಡಬೇಕಾಗಿದೆ.

ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರು ತನಿಖೆಯನ್ನು ಮಾಡಿ ಅಂತಹವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net