ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

New Project (11)
Published on

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ, ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.

ಡಾ.ಹೆಗ್ಗಡೆ ಮಾತನಾಡಿ, ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ, ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಗ್ರಾಮಾಭಿವೃದ್ಧಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿವಾಹಕ ನಿರ್ದೇಶಕ ಅನಿಲ್ ಕುಮಾರ್ ಮಾತನಾಡಿ, ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ತಾಲೂಕುಗಳಲ್ಲಿ 44,119 ರೈತರನ್ನು ಪ್ರೇರೇಪಿಸಿ 1,00,254 ಎಕ್ರೆ ಕೃಷಿ ಭೂಮಿಯನ್ನು ಈಗಾಗಲೇ ಹದಗೊಳಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net