ಯಡ್ತಾಡಿಯಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

bhatta
ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರುಗಿತು.
Published on

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ

ಮಂಗಳೂರಿನ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ, ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ಸಹಕಾರದಲ್ಲಿ ಯಡ್ತಾಡಿಯಲ್ಲಿ 17ನೇ ವರ್ಷದ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರುಗಿತು.

ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬ್ರಹ್ಮಾವರ ಕೃಷಿ ಕೇಂದ್ರದ ಮುಖ್ಯಸ್ಥ ಡಾ.ಧನಂಜಯ ಕೃಷಿ ಯಾಂತ್ರೀಕರಣದ ಬಗ್ಗೆ ತಿಳಿಸಿದರು. ಕೃಷಿ ವಿಜ್ಞಾನಿ ಶಂಕರ್, ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲ ಸುಧೀರ್ ಕಾಮತ್ ವಾಹಿತಿ ನೀಡಿದರು.

ನಿವೃತ್ತ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಚ್.ಜಯಶೀಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಬಾರಕೂರು ದಿ.ಸೀತಾರಾಮ ಶೆಟ್ಟಿ ಅವರ ಸಂಸ್ಮರಣೆ ನಡೆಯಿತು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ಬಾರಕೂರು ಶಾಂತಾರಾಮ ಶೆಟ್ಟಿ, ಬ್ಯಾಂಕ್ ಆಫ್ ಬರೋಡಾ ಹಿರಿಯ ಅಧಿಕಾರಿ ನೀತು ಹಾಗೂ ವಿಜಯ್, ಕೃಷಿಕರಾದ ಕೂಡ್ಲಿ ಶ್ರೀನಿವಾಸ ಉಡುಪ, ಜಯಕರ ಶೆಟ್ಟಿ, ಗ್ರಾವಾಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ರಾವೇಂದ್ರ, ರಾಜಶೇಖರ್ ಮತ್ತು ಕೃಷಿಕರು ಉಪಸ್ಥಿತರಿದ್ದರು. ಯಡ್ತಾಡಿ ಸತೀಶಕುವಾರ್ ಶೆಟ್ಟಿ ಸ್ವಾಗತಿಸಿದರು. ವಿಮಲಾ ಎಸ್.ಶೆಟ್ಟಿ ವಂದಿಸಿದರು. ಜಂಬೂರು ಕೃಷ್ಣ ಅಡಿಗ ಅತಿಥಿಗಳನ್ನು ಪರಿಚಯಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಜಯ ಕುವಾರ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net