

ಮಂಗಳೂರು : ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ವತಿಯಿಂದ ಪದವಿಪೂರ್ವ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 3ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ಕಿಮ್ಸ್ ಯು.ಜಿ. ಮೆಡಿಕ್ವಿಜ್-2024 ಸ್ಪರ್ಧಾಕೂಟ ಅ.5ರಂದು ಬೆಳಗ್ಗೆ 10ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯು.ಕೆ. ಮೋನು ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ವಿತರಿಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಸ್ಪರ್ಧಾ ಕೂಟದ ಸಂಘಟಕ ಡಾ. ದೇವದಾಸ್ ರೈ (98450 81145 )ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
.........