

ಮೈಸೂರು: ಮೈಸೂರು ವಿಶ್ಚವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ನಿವೃತ್ತ ಪ್ರಾಧ್ಯಾಪಕಿ ಪ್ರೊ.ಎನ್.ಉಷಾರಾಣಿ ಅವರು ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ಕೊಡಮಾಡುವ 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರೊ.ಉಷಾರಾಣಿ ಅವರು ಮೈಸೂರು ವಿಶ್ವವಿದ್ಯಾಲಯದ ಶೈಕ್ಷಣಕ ಬಹು ಮಾಧ್ಯಮ ಸಂಶೋಧನಾ ಕೇಂದ್ರದ ಸಂಸ್ಥಾಪಕ ನಿರ್ದೇಶಕರಾಗಿ, ಮೈಸೂರು ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ. ಇವರು ಕೇಂದ್ರ ಸರ್ಕಾರದ ಪ್ರತಿಷ್ಠಿತ ಐಸಿಎಸ್‌ಎಸ್‌ಆರ್ ಸೀನಿಯರ್ ಫೆಲೋ ಗೌರವಕ್ಕೂ ಭಾಜನರಾಗಿದ್ದಾರೆ.