ಮಾ. 27, 28ಕ್ಕೆ ಬೃಹತ್ ಆರೋಗ್ಯ ಜಾಗೃತಿ ವೈದ್ಯಕೀಯ ಪ್ರದರ್ಶನ

medical
Published on

ಮಡಿಕೇರಿ:

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವತಿಯಿಂದ ಮಾ. 27 ಮತ್ತು 28 ರಂದು ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿರುವ ಬೃಹತ್ ಆರೋಗ್ಯ ಜಾಗೃತಿ ವೈದ್ಯಕೀಯ ಪ್ರದರ್ಶನಕ್ಕೆ ಕೊಡಗಿನ ಶಾಸಕದ್ವಯರಾದ ಎ.ಎಸ್. ಪೊನ್ನಣ್ಣ ಮತ್ತು ಡಾ. ಮಂತರ್ ಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊಡಗು ಮೆಡಿಕಲ್ ಕಾಲೇಜ್ ಸ್ಥಾಪನೆಗೊಂಡು ಹತ್ತು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅವೆನ್ಸಿಸ್ 2025 ಕಾರ್ಯಕ್ರಮ ನಡೆಯಲಿದ್ದು ಸುಮಾರು 400 ರಷ್ಟು ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ 30 ಮಾದರಿ ಕಾಯಿಲೆಗಳಿಗೆ ಸಂಬAಧಿಸಿದ 55 ವಿಭಾಗಗಳಲ್ಲಿ ಮಾಹಿತಿ, ಸಲಹೆ ಹಾಗೂ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಅವರೊಂದಿಗೆ ಅವೆನ್ಸಿಸ್ 2025 ತಂಡದ ನಿಯೋಗದ ಪ್ರಮುಖರಾದ ಡಾ. ಪುರುಷೋತ್ತಮ, ಪೂರ್ಣ ಚಂದ್ರ, ವೈ. ಶಶಾಂಕ್ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕದ್ವಯರು ಕೊಡಗು ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಇದೊಂದು ಅತ್ಯಂತ ಉಪಯುಕ್ತ ವಿನೂತನ ಕಾರ್ಯಕ್ರಮವಾಗಿದ್ದು ಸಮಾಜದಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಿರುವ ಕೊಡಗು ಮೆಡಿಕಲ್ ಕಾಲೇಜಿನ ಎಲ್ಲಾ ವೈದ್ಯರು,

ವೈದ್ಯಕೀಯ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net