ಪಾದಯಾತ್ರಿಗಳಿಗೆ ಆರೋಗ್ಯ ಸೇವೆ : ಡಾ.ಕೆ.ವಿಮೂರ್ತಿ ಕಕ್ಕಿಂಜೆ ಶ್ಲಾಘನೆ

New Project (30)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಪಾದಯಾತ್ರಿಗಳಿಗಾಗಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ.ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾಗಿ ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಿಂದ ಆರೋಗ್ಯ ಸೇವೆ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಡಾ.ಕೆ.ವಿಮೂರ್ತಿ ಕಕ್ಕಿಂಜೆ ಹೇಳಿದರು.

ಪಾದಯಾತ್ರಿಗಳಿಗೆ ವೈದ್ಯಕೀಯ ಸೇವೆ ನೀಡುವ ಉದ್ದೇಶದಿಂದ ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಚಾರ್ಮಾಡಿಯಲ್ಲಿ ತೆರೆಯಲಾದ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಮಾತನಾಡಿ, ಮಹಾಶಿವರಾತ್ರಿ ಸಂದರ್ಭ ಸಾವಿರಾರು ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬರುತ್ತಿದ್ದು, ಅವರ ಆರೋಗ್ಯ ರಕ್ಷಣೆಗೆ ಅನುಕೂಲವಾಗುವಂತೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಹೇಮಾವತಿ ಹೆಗ್ಗಡೆ ಹಾಗೂ ಡಿ.ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಆರೋಗ್ಯ ಶಿಬಿರಗಳನ್ನು ತೆರೆಯಲಾಗಿದೆ ಎಂದರು.

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಡಾ.ಅಖಿಲಾ, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಪರ್ಚೇಸ್ ಮ್ಯಾನೇಜರ್ ಅಜಯ್ ಕುಮಾರ್ ಪಿ.ಕೆ., ಶಿಬಿರದ ಸಂಯೋಜಕ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು. ಜಗನ್ನಾಥ ಎಂ.ಕಾರ್ಯಕ್ರಮ ನಿರೂಪಿಸಿದರು.

ಚಾರ್ಮಾಡಿ, ಮುಂಡಾಜೆ, ಬೂಡುಜಾಲು, ಎಸ್‌ಡಿಎಂ ಆಸ್ಪತ್ರೆ, ಎಸ್‌ಡಿಎಂ ಡಿಎಡ್ ಕಾಲೇಜು ಬಳಿ, ಹಾಗೂ ಧರ್ಮಸ್ಥಳ ಮುಂತಾದ 6 ಕಡೆಗಳಲ್ಲಿ ಆರೋಗ್ಯ ಶಿಬಿರಗಳನ್ನು ತೆರೆದು, ಅಗತ್ಯ ಔಷಧಿ, ಮುಲಾಮು, ಸ್ಪ್ರೇ ಬ್ಯಾಂಡೇಜ್ ಇತ್ಯಾದಿಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. 2024ರಲ್ಲಿ 24,506 ಮಂದಿ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ ನೀಡಿದ್ದು, ಇದಕ್ಕಾಗಿ ಸರಿಸುಮಾರು 7 ಲಕ್ಷ ರೂ.ಗಳನ್ನು ಡಾ.ಹೆಗ್ಗಡೆಯವರ ಆದೇಶದಂತೆ ವಿನಿಯೋಗಿಸಲಾಗಿತ್ತು ಎಂ.ಜನಾರ್ದನ್, ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net