ಮಹಿಳೆಯರ ಆರೋಗ್ಯ ಸಮಸ್ಯೆ ನಿವಾರಣೆಗೆ ವ್ಯವಸ್ಥೆ: ಎಂ.ಜನಾರ್ದನ್ ಮಾಹಿತಿ ಸೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

New Project
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಹಲವಾರು ವೈದ್ಯಕೀಯ ಉಚಿತ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಈ ದಿನ ಮಹಿಳೆಯರ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ನಡೆಸಲಾಗುತ್ತಿದೆ ಎಂದು ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಹೇಳಿದರು.

ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ.ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ಬುಧವಾರ ನಡೆದ ಉಚಿತ ಸೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾಗಪುರ ಕೆನರಾ ಬ್ಯಾಂಕ್ ಡಿ.ಜಿ.ಎಂ., ರೀಜನಲ್ ಹೆಡ್ ಸುರೇಂದ್ರ ಬಾಬು ಕಾರ್ಯಕ್ರಮ ಉದ್ಘಾಟಿಸಿದರು. ಡಾ.ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಂತಾನೋತ್ಪತ್ತಿ ಔಷಧ ಕನ್ಸಲ್ಟೆಂಟ್ ಡಾ.ಪ್ರಮೋದ ಲಕ್ಷ್ಮಣ್, ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸ್ವರ್ಣಲತಾ, ಸ್ಕಾ ್ಯನಿಂಗ್ ತಜ್ಞ ಡಾ.ಮಹೇಶ್, ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ದೇವೇಂದ್ರ ಕುಮಾರ್ ಪಿ., ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಪ್ರಿಯಾಂಕಾ, ಡಾ.ಅನ್ವಿತಾ ರಾವ್ ಉಪಸ್ಥಿತರಿದ್ದರು. ಮಾರ್ಕೆಟಿಂಗ್ ಎಕ್ಷಿಕ್ಯೂಟಿವ್ ಸುಮಂತ್ ರೈ ಕಾರ್ಯಕ್ರಮ ಸಂಯೋಜಿಸಿದರು. ಸಂಪರ್ಕ ಅಧಿಕಾರಿ ಚಿದಾನಂದ ನಿರ್ವಹಿಸಿದರು.

ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನದ ಕ್ಯಾನ್ಸರ್ ಇತ್ಯಾದಿಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ರೋಗಿಗಳು ಗುಣಮುಖರಾಗುತ್ತಾರೆ. ಡಾ.ಸ್ವರ್ಣಲತಾ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ https://www.vijayavani.net/sri-subraya-temple-brahmakalashotsava-at-katukukke https://www.vijayavani.net/dr-prabhachandra-jain-congratulated-by-jain-milan

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net