ಮೆಡಿಕಲ್ ಕಾಲೇಜಿಗೆ ಅನುದಾನ ಬಿಡುಗಡೆ - ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

PTR_3 APR_1
Published on

ಪುತ್ತೂರು: ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾತಿಯ ವಿಚಾರದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಪುತ್ತೂರಿಗೆ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಮಂಜೂರುಗೊಂಡ ಬಳಿಕ ಬನ್ನೂರಿನಲ್ಲಿ ಕಾಯ್ದಿರಿಸಿದ ೪೦ ಎಕರೆ ಜಾಗಕ್ಕೆ ಆರೋಗ್ಯ ಇಲಾಖೆಯ ಅಽಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಉನ್ನತ ಅಽಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಬೆನ್ನಲ್ಲೇ ಏ.೩ರಂದು ಶಾಸಕರು ಬೆಂಗಳೂರಿನಲ್ಲಿ ಸಚಿವರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮಾತುಕತೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ವಿಚಾರಕ್ಕೆ ಸಂಬಂದಿಸಿದಂತೆ ಪ್ರಾರಂಭಿಕ ೩೦೦ ಕೋಟಿ ರೂ. ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಮೆಡಿಕಲ್ ಕಾಲೇಜು ಪೂರಕವಾಗಿ ೪೦೦ ಬೆಡ್‌ನ ಆಸ್ಪತ್ರೆಯ ನಿರ್ಮಾಣವಾಗಬೇಕಿದೆ. ಆಸ್ಪತ್ರೆ ನಿರ್ಮಾಣವಾದ ಬಳಿಕ ಮೆಡಿಕಲ್ ಕಾಲೇಜು ಪ್ರಕ್ರಿಯೆ ಆರಂಭವಾಗಲಿದ್ದು, ಆಸ್ಪತ್ರೆ ನಿರ್ಮಾಣಕ್ಕೆ ೩೦೦ ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಬಗ್ಗೆ ಭರವಸೆಯನ್ನು ನೀಡಿದ್ದಾರೆ.

ಪುತ್ತೂರಿನ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಪೂರಕವಾಗಿ ಇಬ್ಬರು ಸಚಿವರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿದೆ. ಮೊದಲಿಗೆ ೪೦೦ ಬೆಡ್‌ನ ಆಸ್ಪತ್ರೆ ನಿರ್ಮಾಣವಾಗಲಿದ್ದು, ಇದಕ್ಕಾಗಿ ೩೦೦ ಕೋಟಿ ರೂ ಅನುದಾನ ಶೀಘ್ರದಲ್ಲೇ ಮಂಜೂರಾಗುವ ವಿಶ್ವಾಸವಿದೆ. ಹಂತ ಹಂತವಾಗಿ ಮೆಡಿಕಲ್ ಕಾಲೇಜಿಗೆ ಸಂಬಂಽಸಿದ ಎಲ್ಲ ವಿಚಾರಗಳು ಸರ್ಕಾರಿ ಮಟ್ಟದಲ್ಲಿ ವೇಗ ಪಡೆದುಕೊಳ್ಳಲಿದೆ.

| ಅಶೋಕ್ ಕುಮಾರ್ ರೈ, ಶಾಸಕರು ಪುತ್ತೂರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net