14ರಂದು ವೈದ್ಯಕೀಯ ಕಾಲೇಜು ಪದವಿ ಪ್ರದಾನ

graduation new
Published on

ಮೈಸೂರು: ಮೈಸೂರು ವೈದ್ಯಕೀಯ ಕಾಲೇಜು ನೂರು ವರ್ಷ ಪೂರೈಸಿದ್ದು, ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ.ಎಸ್.ಚಂದ್ರಶೇಖರ್ ತಿಳಿಸಿದರು.

ಕಾಲೇಜು ಹಾಗೂ ಎಂಎಂಸಿ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಏ.14ರಂದು ಬೆಳಗ್ಗೆ 10ಕ್ಕೆ 95ನೇ ಪದವಿ ಪ್ರದಾನ ಸಮಾರಂಭ ಕರ್ನಾಟಕ ರಾಜ್ಯ ಮುಕ್ತ ವಿವಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ವೇಳೆ 151 ಪದವೀಧರರಿಗೆ ಪದವಿ ಪ್ರದಾನ ಮಾಡಲಾಗುವುದು. ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ಡೀನ್ ಡಾ.ಕೆ.ಆರ್.ದಾಕ್ಷಾಯಣಿ, ಡಾ.ಎಚ್.ಎನ್.ದಿನೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಟಾಪರ್‌ಗಳಿಗೆ ಚಿನ್ನದ ಪದಕ ಮತ್ತು 14 ವಿಷಯವಾರು ಟಾಪರ್‌ಗಳಿಗೆ ನಗದು ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಡಾ.ಪಿ.ಎಲ್.ಬಸವಣ್ಣ, ಡಾ.ಅರ್ಜುನ್, ಡಾ.ಸುಮಂತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net