ಕಲ್ಯಾಣದಲ್ಲಿಯೇ ಏಮ್ಸ್ ಸ್ಥಾಪನೆ ಕೇಂದ್ರ ‌ಭರವಸೆ

IMG-20230825-WA0085
Published on

ಜಿಮ್ಸ್ ಆಸ್ಪತ್ರೆಗೆ ಸಚಿವ ಡಾ.ಶರಣಪ್ರಕಾಶ ಹಠಾತ್ ಭೇಟಿ | ರೋಗಿಗಳಿಗೆ ಸರಿಯಾಗಿ ನೋಡಿಕೊಳ್ಳಲು ಸೂಚನೆ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಅತ್ತ್ಯುನ್ನತ ವೈದ್ಯಕೀಯ ಸಂಸ್ಥೆಯಾಗಿರುವ ಏಮ್ಸ್ನ್ನು  ಕಲ್ಯಾಣ ಕರ್ನಾಟಕ ಭಾಗದ ರಾಯಚೂರಿನಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉಡಗಿ ತಿಳಿಸಿದರು.
ನಗರದಲ್ಲಿರುವ ಜಿಮ್ಸ್ ಆಸ್ಪತ್ರೆಗೆ ಹಠಾತ್ ಭೇಟಿ ನೀಡಿ ಎಲ್ಲ ವಿಭಾಗಗಳನ್ನು ಪರೀಶೀಲಿಸಿ, ರೋಗಿಗಳ ದೂರು ಆಲಿಸಿದ ಬಳಿಕ ಪತ್ರಕರ್ತರ ಜತೆಗೆ ಮಾತನಾಡಿ. ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಳವಿಯಾ ಅವರು ರಾಜ್ಯ ಸರ್ಕಾರ  ಪ್ರಸ್ತಾವನೆ ಸಲ್ಲಿಸುವ ಸ್ಥಳದಲ್ಲಿಯೇ ಏಮ್ಸ್ ಸ್ಥಾಪಿಸುವ ಭರವಸೆ ನೀಡಿದ್ದಾರೆ ಎಂದರು.
ಕಲ್ಯಾಣ ಕರ್ನಾಟಕದ ಶಾಸಕರ, ಪ್ರಮುಖರ ನಿಯೋಗದೊಂದಿಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿz್ದೆÃವೆ. ರಾಯಚೂರಿನಲ್ಲಿ ಸ್ಥಾಪಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಅಲ್ಲಿಯೇ ಅಸ್ತಿತ್ವಕ್ಕೆ ಬರಲಿದೆ  ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಯಾದಗಿರಿ, ಚಿಕ್ಕಬಳ್ಳಾಪುರ. ಹಾವೇರಿ ಇನ್ನಿತರ ವೈದ್ಯಕೀಯ ಕಾಲೇಜುಗಳ ಕಟ್ಟಡ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ತನಿಖೆಗೆ ವಹಿಸಿಕೊಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಳಾಗುವುದು ಎಂದರು. ಅಲ್ಲದೆ ಬಹು ನಿರೀಕ್ಷಿತ ಯುವನಿಧಿ ಯೋಜನೆಯನ್ನು ಡಿಸೆಂಬರ್‌ನಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.
ರೋಗಿಗಳಿಗೆ ಸರಿಯಾಗಿ ನೋಡಿಕೊಳ್ಳಲು ಸೂಚನೆ
ಜಿಮ್ಸ್ಗೆ ಭೇಟಿ ನೀಡಿದಾಗ ಅಲ್ಲಿನ ಕೆಲವು ರೋಗಿಗಳು ಸಮಸ್ಯೆ ಹೇಳಿಕೊಂಡರು. ಕೂಡಲೇ ಸ್ಥಳದಲ್ಲಿದ್ದ ವೈದ್ಯಾಧಿಕಾರಿಗಳಿಗೆ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳಬೇಕು, ಸರ್ಕಾರ ಅವರಿಗೆ ನೀಡಿರುವ ಎಲ್ಲ ಸವಲತ್ತು ಕೊಡಬೇಕು ಎಂದು ಡಾ.ಶರಣಪ್ರಕಾಶ ಪಾಟೀಲ್ ತಾಕೀತು ಮಾಡಿದರು. ಕೆಲವೊಂದು ಕಡೆಗಳಲ್ಲಿನ ಅಸ್ತವ್ಯಸ್ಥೆ ಕಂಡು ಕೆಂಡಾಮAಡಲರಾದರು. ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.
ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ, ಜಿಲ್ಲಾ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ, ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಸಂದೀಪ ಹರ್ಷಣಗಿ ಸೇರಿದಂತೆ ಅನೇಕ ವೈದ್ಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net