ಅಪಘಾತದಲ್ಲಿ ಮೆಡಿಕಲ್ ರೆಪ್ರೆಸೆಂಟೇಟಿವ್ ಸಾವು

maheshkumar
Published on

ಶಿವಮೊಗ್ಗ: ಮಲವಗೊಪ್ಪದ ತಂದೆ ಮನೆಯಿಂದ ಮಕ್ಕಳನ್ನು ವಾಪಸ್ ಕರೆತರಲು ಬೈಕ್‌ನಲ್ಲಿ ಹೋಗುತ್ತಿದ್ದ ಮೆಡಿಕಲ್ ರೆಪ್ರೆಸೆಂಟೇಟಿವ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಶರಾವತಿ ನಗರದಲ್ಲಿ ವಾಸವಿದ್ದ ಮೆಡಿಕಲ್ ರೆಪ್ರೆಸೆಂಟೇಟಿವ್ ಮಹೇಶ್‌ಕುಮಾರ (35) ಮೃತರು. ಮೂಲತಃ ಮಲವಗೊಪ್ಪದ ಮಹೇಶ್‌ಕುಮಾರ್ ಶರಾವತಿನಗರದಲ್ಲಿ ಪತ್ನಿ, ಮಕ್ಕಳ ಜತೆ ವಾಸವಾಗಿದ್ದರು. ಭಾನುವಾರ ಬೆಳಗ್ಗೆ ಮಕ್ಕಳಿಬ್ಬರನ್ನು ಮಲವಗೊಪ್ಪದ ತಂದೆ ಮನೆಯಲ್ಲಿ ಬಿಟ್ಟು ಬಂದಿದ್ದು, ರಾತ್ರಿ ವಾಪಸ್ ಕರೆದುಕೊಂಡು ಬರಲು ಹೋಗುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net