ವೈದ್ಯಕೀಯ ವಿದ್ಯಾರ್ಥಿನಿ ಕೊಲೆ; ಮೈಸೂರಿನಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ

mysore
Published on

ಮೈಸೂರು: ಕೋಲ್ಕತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸದಸ್ಯರು ನಗರದಲ್ಲಿ ಶನಿವಾರ ಸಂಜೆ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.


ಕೋರ್ಟ್ ಎದುರಿನ ಗಾಂಧಿ ಪುತ್ಥಳಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಈ ಘಟನೆಯು ಕೆಲಸದ ಸ್ಥಳದಲ್ಲಿ ಸ್ತ್ರೀಯರ ರಕ್ಷಣೆ, ಮಹಿಳೆಯ ಆತ್ಮಗೌರವ ಸುರಕ್ಷತೆ ಮತ್ತು ರಕ್ಷಣೆ ಕುರಿತು ಪ್ರಶ್ನೆಯನ್ನು ಎತ್ತುವಂತೆ ಮಾಡಿದೆ. ಈ ಘೋರಕೃತ್ಯ ಖಂಡನೀಯ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕು.

ಮೃತ ಮಹಿಳೆಗೆ ತ್ವರಿತ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಸದಸ್ಯರಾದ ರತಿರಾವ್, ದ.ಸರಸ್ವತಿ, ಸವಿತಾ ಪ.ಮಲ್ಲೇಶ್, ವಿಶ್ರಾಂತ ಕುಲಪತಿ ಡಾ.ಸಬಿತಾ ಭೂಮಿಗೌಡ, ಸಾಹಿತಿ ನಾ.ದಿವಾಕರ್, ನಿವೃತ್ತ ಪ್ರಾಧ್ಯಾಪಕ ಕಾಳಚನ್ನೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net