ಕೆರೆಯಲ್ಲಿ ಮುಳುಗಿ ವೈದ್ಯಕೀಯ ವಿದ್ಯಾರ್ಥಿ ಪಾಷಾ ಸಾವು

9 HVR 1
Published on

ಹಾವೇರಿ: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ವೈದ್ಯಕೀಯ ವಿದ್ಯಾರ್ಥಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ದೇವಗಿರಿ ಗ್ರಾಮದ ಚೌಡಮ್ಮನ ಕೆರೆಯಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಮೈಸೂರು ಮೂಲದ ನುಮನ್ ಪಾಷಾ(20) ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ. ನೂತನ ಹಾವೇರಿ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ಮೆಡಿಕಲ್ ಕೋರ್ಸ್‌ಗೆ ನುಮನ್ ಪಾಷಾ ಪ್ರವೇಶ ಪಡೆದಿದ್ದರು. ಸಂಜೆ ನಾಲ್ವರು ಗೆಳೆಯರೊಂದಿಗೆ ಈಜಲು ತೆರಳಿದ್ದಾಗ ಪಾಷಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಬೇಟಿ ನೀಡಿ ಪರಿಶೀಲಿಸಿದರು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net