ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನಾ ರ್ಯಾಲಿ

Medical student strike
Published on

ಕಾರವಾರ: ಕೊಲ್ಕತ್ತಾದಲ್ಲಿ ವೈದ್ಯೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಕ್ರಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಶುಕ್ರವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ವಿದ್ಯಾರ್ಥಿಗಳು ವೈದ್ಯರಿಗೆ ರಕ್ಷಣೆ ನೀಡಿ ಎಂಬ ಸಂದೇಶವಿರುವ ಬ್ಯಾನರ್ ಹಿಡಿದು, ನಗರದ ಪ್ರಮುಖ ಬೀದಿಗಳಲ್ಲಿ ಮೌನ ಮೆರವಣಿಗೆ ನಡೆಸಿದರು.
ಇಂದು ಐಎಂಎ ಪ್ರತಿಭಟನೆ:
ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕಾರವಾರ ಘಟಕದಿಂದ ಶನಿವಾರ ಬೆಳಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಧ್ಯಕ್ಷ ಡಾ.ಸುರೇಶ ಭಟ್ ತಿಳಿಸಿದ್ದಾರೆ. ಕ್ರಿಮ್ಸ್ ವೈದ್ಯ, ನರ್ಸಿಂಗ್ ವಿದ್ಯಾರ್ಥಿಗಳು, ಹಾಗೂ ಐಎಂಎ ಎಲ್ಲ ಸದಸ್ಯರು ಪಾಲ್ಗೊಳ್ಳುವರು ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net