ಗ್ರಾಮಸ್ಥರ ಅಹವಾಲು ಆಲಿಸಿದ ಮಂತರ್ ಗೌಡ

meet
Published on

ಕುಶಾಲನಗರ:

ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು ಸಮೀಪದ ಕುಂಬಾರ ಹಡ್ಲು ಗ್ರಾಮಕ್ಕೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಸೋಮವಾರ ಭೇಟಿ ನೀಡಿ ಗ್ರಾಮಸ್ಥರ ಅಹವಾಲಗಳನ್ನು ಸ್ವೀಕರಿಸಿ ಗ್ರಾಮಸ್ಥರೊಂದಿಗೆ ಸಮಾಲೋಚನಾ ಕಾರ್ಯಕ್ರಮ ನಡೆಸಿದರು. ಕುಂಬಾರ ಹಡ್ಲು ಗ್ರಾಮಸ್ಥರು ಗ್ರಾಮದ ಗುಳಿಗ ದೇವರ ಪೂಜೆಗೆ ಅಗಮಿಸಿದ ಶಾಸಕ ಮಂತರ್ ಗೌಡ ಅವರಿಗೆ ಗ್ರಾಮದ ಸಮಸ್ಯೆಗಳ ಮಾಹಿತಿ ನೀಡಿದರು.

ಕುಂಬಾರ ಹಡ್ಲು ಗ್ರಾಮ ಜೇನುಕಲ್ಲು ಮೀಸಲು ಅರಣ್ಯ ಪ್ರದೇಶದ ಸಮೀಪದಲ್ಲಿದ್ದು, ಕಾಡಾನೆಗಳಿಂದ ಅಪಾರ ಪ್ರಮಾಣದ ಬೆಳೆ ಹಾನಿ ಆಗುತ್ತಿದೆ. ಸೀಗೆಹೊಸೂರು, ಕೂಡಿಗೆ ಕಡೆಗೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ತಿರುಗಾಡಲು ಕಾಡಾನೆಗಳ ಹಾವಾಳಿಯಿಂದಾಗಿ ಸಮಸ್ಯೆ ಆಗಿದೆ ಎಂದು ದೂರಿಕೊಂಡರು.

ಭೂಮಿಯ ಹಕ್ಕುಪತ್ರ, ರಸ್ತೆ, ಮೂಲಭೂತ ಸೌಕರ್ಯಗಳು ಸೇರಿದಂತೆ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಸಮಾಲೋಚನಾ ಸಭೆ ಗ್ರಾಮ ಪಂಚಾಯತಿ ಸದಸ್ಯ ಅನಂತ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮಸ್ಥರು ಸಭೆಯಲ್ಲಿ ಶಾಸಕರಿಗೆ ಮನವಿ ಪತ್ರ ನೀಡಿದರು. ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಗ್ರಾಮಸ್ಥರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಮುಖವಾಗಿ ಕಾಡಾನೆಗಳ ಹಾವಾಳಿ ಬಗ್ಗೆ ನೂತನವಾಗಿ ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಲಾಗುವುದು ಎಂದರು.

ಕುಶಾಲನಗರದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕಾಂಗ್ರೆಸ್ ಮುಖಂಡರಾದ ನಾಪಂಡ ಮುತ್ತಪ್ಪ, ರಾಮೇಶ್ವರ ಕೂಡುಮಂಗಳೂರು ಸಹಕಾರ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್, ಬಸವನಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆರ್. ಎಸ್. ಅರುಣ್ ರಾವ್, ಕಾಂಗ್ರೆಸ್ ವಲಯ ಅಧ್ಯಕ್ಷ ಅನಂತ್, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯ ಶಿವಕುಮಾರ್, ಗ್ರಾಮದ ಅಧ್ಯಕ್ಷ ರಘು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net