ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ

meet
Published on

ಮಡಿಕೇರಿ:

ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 118 ನೇ ಜನ್ಮದಿನವನ್ನು ಏ.5 ರಂದು ಮತ್ತು ಏಪ್ರಿಲ್, 14 ರಂದು ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿವನ್ನು ನಗರದ ಗಾಂಧಿ ಭವನದಲ್ಲಿ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು.

ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ತೊಡಗಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರು ಒಂದು ಸಮಾಜ ಅಥವಾ ಸಮುದಾಯಕ್ಕೆ ಸೀಮಿತವಲ್ಲ. ಅವರು ರಾಷ್ಟçಕ್ಕೆ ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು, ನೀಟ್, ಸಿಇಟಿ, ನಾಗರಿಕ ಸೇವೆ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವಂತಾಗಬೇಕು. ಇದರಿಂದ ಇತರರಿಗೂ ಪ್ರೇರಣೆಯಾಗಲಿದೆ.

ಇಬ್ಬರು ಮಹನೀಯರ ಜೀವನ ಸಂದೇಶವನ್ನು ತಿಳಿದುಕೊಳ್ಳುವಂತಾಗಬೇಕು. ಜತೆಗೆ ಸಮಾಜ ಕಲ್ಯಾಣ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದಲ್ಲದೆ ಸೌಲಭ್ಯಗಳನ್ನು ವಿತರಿಸುವಂತಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಸದಸ್ಯ ಎಸ್.ಸಿ. ಸತೀಶ್ ವಿವಿಧ ಸಮಾಜದ ಪ್ರಮುಖರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವಂತಾಗಬೇಕು ಎಂದು ಕೋರಿದರು. ಪ್ರಮುಖರಾದ ಮೋಹನ್ ಮೌರ್ಯ ಮಾತನಾಡಿ ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಕಲ್ಪಿಸಿದ ಇಬ್ಬರು ಮಹಾನ್ ಸಾಧಕರ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ನೀಡುವಂತಾಗಬೇಕು. ಹಾಗೆಯೇ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯವರನ್ನು ಸಹ ಆಹ್ವಾನಿಸಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯ ಪಿ.ಪಿ. ಸುಕುಮಾರ್ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಯಂದು ಮೆರವಣಿಗೆ ಏರ್ಪಡಿಸುವಂತಾಗಬೇಕು, ಜೊತೆಗೆ ಕಲಾತಂಡ ಆಹ್ವಾನಿಸಬೇಕು ಎಂದು ಕೋರಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕÀ ದಿವಾಕರ ಮಾತನಾಡಿ ಇಬ್ಬರು ಮಹಾನ್ ನಾಯಕರ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಅನಾಥ ಆಶ್ರಮಗಳಿಗೆ ಅಗತ್ಯ ಸಹಕಾರ ನೀಡುವಂತಾಗಬೇಕು ಎಂದು ಕೋರಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, 2023 ಮತ್ತು 2024 ರಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಹಿನ್ನೆಲೆ ಸರಳವಾಗಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನವನ್ನಯ ಸರಳವಾಗಿ ಆಚರಿಸಲಾಗಿತ್ತು, ಈ ವರ್ಷ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಸಮಿತಿ ಸದಸ್ಯರಾದ ನಾಗರಾಜ ಶೆಟ್ಟಿ, ಗಣೇಶ್, ಪ್ರೇಮಕುಮಾರ್, ವೇಣುಕುಮಾರ್, ಪೌರಾಯುಕ್ತರಾದ ಎಚ್.ಆರ್. ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತ, ಜಿಲ್ಲಾ ವಿಕಲಚೇತನರ ಅಧಿಕಾರಿ ವಿಮಲ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಐಟಿಡಿಪಿ ಇಲಾಖೆಯ ವ್ಯವಸ್ಥಾಪಕÀ ದೇವರಾಜ್, ಕಾರ್ಮಿಕ ಇಲಾಖೆಯ ಶೀರಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net