ಕೂಡುಮಂಗಳೂರು ಗ್ರಾ.ಪಂ. ಸಾಮಾನ್ಯ ಸಭೆ

meet
Published on

ಕುಶಾಲನಗರ:

ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಭಾಸ್ಕರ್ ನಾಯಕ್ ಪಂಚಾಯಿತಿ ವ್ಯಾಪ್ತಿಯಲ್ಲಿರುವ 10 ಅಂಗನವಾಡಿಗಳಿಗೂ ಸೋಲಾರ್ ವಿದ್ಯುತ್ ಸಂಪರ್ಕ ನೀಡುವ ಬಗ್ಗೆ ಪ್ರಸ್ತಾವನೆ ಮಾಡಿದರು. ಎಲ್ಲಾ ಸದಸ್ಯರು ಸರ್ವಾನುಮತದಿಂದ ಇದಕ್ಕೆ ಒಪ್ಪಿಗೆ ಸೂಚಿಸಿದರು. 2025-26 ಸಾಲಿನ ವಾರ್ಷಿಕ ಕ್ರಿಯಾ ಯೋಜನೆಗಾಗಿ ಕಾಮಗಾರಿ ಗುಚ್ಛ ತಯಾರಿಸಲಾಯಿತು.

ವಸತಿ ಯೋಜನೆ ಫಲಾನುಭವಿಗಳು ಮನೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ ಸರ್ಕಾರದ ಹಣವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಅಧ್ಯಕ್ಷರು ಸಲಹೆ ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷೆ ಶಶಿಕಲಾ, ಪಿಡಿಒ ಸಂತೋಷ್, ಪಂಚಾಯತಿ ಸದಸ್ಯರು, ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net