ಮುಂಗಾರು ಎದುರಿಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

meet
Published on

ಮಡಿಕೇರಿ:

ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ ಸಂಖ್ಯೆ, ವಾಟ್ಸ್ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್ ತಿಳಿಸಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಂಗಳವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು.

ಮಡಿಕೇರಿ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ 08272-228396, ವಿರಾಜಪೇಟೆ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-257328, ಸೋಮವಾರಪೇಟೆ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-282045, ಕುಶಾಲನಗರ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-200198 ಹಾಗೂ ಪೊನ್ನಂಪೇಟೆ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-249700 ಸಹಾಯವಾಣಿ ಕೇಂದ್ರ ಆರಂಭಿಸಿಲಾಗಿದೆ. ಮಳೆಯಿಂದ ಉಂಟಾಗುವ ಹಾನಿ ಸಂಬAಧ ಜಿಲ್ಲಾಡಳಿತದಿಂದ ಆರಂಭಿಸಿರುವ ವಾಟ್ಸ್ಆಪ್ ಗುಂಪಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಛಾಯಾಚಿತ್ರ ಹಾಗೂ ವಾಯ್ಸ್ ರೆಕಾರ್ಡ್ ಸಹಿತ ಮಾಹಿತಿ ನೀಡಬಹುದಾಗಿದೆ. . ವಿಪತ್ತು ನಿರ್ವಹಣೆ ಸಂಬAಧ ಜಿಲ್ಲಾ ಮಟ್ಟದಲ್ಲಿ ವಾಟ್ಸ್ಆಪ್ ಗ್ರೂಪ್ ಮಾಡಿರುವಂತೆ ತಾಲೂಕು ಮಟ್ಟದಲ್ಲಿಯೂ ಸಹ ತಹಸೀಲ್ದಾರರ ನೇತೃತ್ವದಲ್ಲಿ ವಾಟ್ಸ್ಆಪ್ ಗುಂಪು ರಚಿಸಿಕೊಂಡು ತಾ.ಪಂ.ಇಒ, ಪಿಡಿಒ, ಗ್ರಾ.ಪಂ.ಕಾರ್ಯದರ್ಶಿಗಳು, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರ್‌ಗಳು, ಪೊಲೀಸ್, ಅಗ್ನಿಶಾಮಕ, ಗ್ರಾಮ ಸಹಾಯಕರು, ಗೃಹರಕ್ಷಕದಳ ಗುಂಪಿಗೆ ಸೇರಿಸಿಕೊಂಡು ವಿಪತ್ತು ನಿರ್ವಹಣೆಯನ್ನು ನಿರ್ವಹಿಸಬೇಕು.

ಈಗಾಗಲೇ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರ ಜತೆ ತಾಲೂಕು ಮಟ್ಟದ ಅಧಿಕಾರಿಗಳು ಸಹ ಸಮನ್ವಯ ಸಾಧಿಸಿ ವಿಪತ್ತು ನಿರ್ವಹಣೆ ಮಾಡಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಗಮನಹರಿಸಬೇಕು.

ಜಿಲ್ಲೆಯಲ್ಲಿ ಮುಂಗಾರು ಹಿನ್ನೆಲೆ ಬಿರುಗಾಳಿ ಹೆಚ್ಚಾಗಿದ್ದು, ಇದರಿಂದ ಮನೆ ಹಾಗೂ ವಿದ್ಯುತ್ ಕಂಬಕ್ಕೆ ಹೆಚ್ಚಿನ ಹಾನಿಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಗಮನ ಹರಿಸಬೇಕು. ಲೋಕೋಪಯೋಗಿ, ಪಂಚಾಯತ್ ಮತ್ತಿತರ ಎಂಜಿನಿಯರ್ ಇಲಾಖೆಗಳು ರಸ್ತೆ ಹಾನಿ, ರಸ್ತೆಗೆ ಮರ ಬಿದ್ದಲ್ಲಿ ಸುಗಮ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಈ ಬಾರಿ ಮುಂಗಾರು ಮುಂಚಿತವಾಗಿ ಆರಂಭವಾಗಿರುವುದರಿAದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯ ಸೂಕ್ಷö್ಮ ಮತ್ತು ಅತಿ ಸೂಕ್ಷö್ಮ ಪ್ರದೇಶದಲ್ಲಿನ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಕಾಳಜಿ ಕೇಂದ್ರದಲ್ಲಿ ಉತ್ತಮ ಆಹಾರ ನೀಡಬೇಕು. ಯಾವುದೇ ಕಾರಣಕ್ಕೂ ದೂರು ಬರದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಜಿಲ್ಲಾಡಳಿತ ಬಳಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ 40 ಕೋಟಿ ರೂ. ಹಣವಿದೆ. ಜೊತೆಗೆ ತಹಸೀಲ್ದಾರರ ಬಳಿ ಸಹ ಹಣವಿದೆ. ಈ ಬಾರಿ ಮೇ ತಿಂಗಳಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಬಿರುಗಾಳಿಯಿಂದ ಮನೆಗೆ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಈ ಬಾರಿ 23 ಮನೆಹಾನಿ ಪ್ರಕರಣಕ್ಕೆ ಸಂಬAಧಿಸಿದAತೆ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ.

ಅಗ್ನಿಶಾಮಕ ದಳ, ಪೊಲೀಸ್ ರಕ್ಷಣಾ ತಂಡ, ಗೃಹರಕ್ಷಕ ದಳ, ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದು, ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳನ್ನು ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಹಾಗೂ ಈ ಹಿಂದೆ ವಿಕೋಪವಾದ ಸ್ಥಳಗಳ ಆಧಾರದ ಮೇಲೆ ಗುರುತಿಸಲಾಗಿದೆ. ಒಟ್ಟು 43 ಪ್ರವಾಹ ಪೀಡಿತ ಮತ್ತು 44 ಭೂಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಹೋಬಳಿವಾರು ಒಟ್ಟು 20 ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ವಿಕೋಪಗಳು ಸಂಭವಿಸಿದಲ್ಲಿ ಸ್ಥಳೀಯ ಮಟ್ಟ ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಮಾಡಿಕೊಂಡು ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರಕೃತಿ ವಿಕೋಪ ಕಂಟ್ರೋಲ್ ರೂಮ್ ಸಹಾಯವಾಣಿ ಕೇಂದ್ರ 24*7 ಕಾರ್ಯ ನಿರ್ವಹಿಸಲಿವೆ. ಹಾಗೆಯೇ ಸೆಸ್ಕ್, ಅರಣ್ಯ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ವಿಕೋಪ ಪೀಡಿತ ಪ್ರದೇಶಗಳಲ್ಲಿ ಲಭ್ಯವಿರಬೇಕಾದ ಔಷಧ, ಚಿಕಿತ್ಸಾ ಉಪಕರಣಗಳ ಕುರಿತಂತೆ ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಮಳೆಗಾಲದಲ್ಲಿನ ಸಮಸ್ಯೆಆದ ಸಾಂಕ್ರಾಮಿಕ ರೋಗ ನಿರ್ವಹಣೆಗೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಲಭ್ಯವಿರುವಂತೆ ಆರೋಗ್ಯ ಇಲಾಖೆಯಿಂದ ಕ್ರಮವಹಿಸಲಾಗಿದೆ. ಈ ಕಾಳಜಿ ಕೇಂದ್ರಗಳ ಉಸ್ತುವಾರಿಯನ್ನು ಆಯಾಯ ನೋಡಲ್ ಅಧಿಕಾರಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾಹಿತಿ ನೀಡಿ ಈ ಬಾರಿ ಮೇ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡುವ ಗುರಿ ಇದೆ. ಬಿತ್ತನೆ ಬೀಜ ಜೂನ್ ಮೊದಲ ವಾರದಿಂದ ವಿತರಿಸಲಾಗುತ್ತದೆ.

88 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಸೆಪ್ಟೆಂಬರ್‌ವರೆಗೂ ರಸಗೊಬ್ಬರ ಪೂರೈಕೆಯಾಗಿದೆ. ಉಳಿದಂತೆ ರಸಗೊಬ್ಬರ ಪೂರೈಕೆಯಾಗಲಿದ್ದು,. ಡಿಎಪಿ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು.

ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿAಗ್ ವಿಭಾಗ, ನಗರಾಭಿವೃದ್ಧಿ ಇಲಾಖೆಗಳು ಮುಂತಾದ ಸಂಬAಧಪಟ್ಟ ಎಂಜಿನಿಯರಿAಗ್ ಇಲಾಖೆಗಳು ಪ್ರವಾಹದ ಪರಿಸ್ಥಿತಿ ತಲೆದೋರದಂತೆ ತಮ್ಮ ವ್ಯಾಪ್ತಿಯ ಚರಂಡಿ, ನಾಲೆಗಳಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಕಂದಾಯ ಇಲಾಖೆಗೆ ಸಂಬAಧಿದAತೆ ಮಾಹಿತಿ ನೀಡಿದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾ.ಪಂ.ಇಒಗಳು, ಎಂಜಿನಿಯರ್‌ಗಳು ಇದ್ದರು.

ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 08272-221077

ವಾಟ್ಸ್ಆಪ್ ಸಂಖ್ಯೆ 8550001077

ಮಡಿಕೇರಿ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ 08272-228396

ವಿರಾಜಪೇಟೆ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ 08274-257328

ಸೋಮವಾರಪೇಟೆ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ 08276-282045

ಕುಶಾಲನಗರ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ 08276-200198

ಪೊನ್ನಂಪೇಟೆ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ 08274-249700

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net