

ಕುಶಾಲನಗರ:
ಕುಶಾಲನಗರ ತಾಲೂಕು ತೊರೆನೂರು ಗ್ರಾಮ ಪಂಚಾಯತಿ ಮಾಸಿಕ ಸಭೆ ಅಧ್ಯಕ್ಷೆ ಶೋಭಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ ವಿವಿಧ ಕಾಮಗಾರಿಗಳಿಗೆ ಸಂಬAಧಿಸಿದAತೆ ಕ್ರಿಯಾ ಯೋಜನೆ ತಯಾರಿಸಲು ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ತಮ್ಮ ವಾರ್ಡ್ ನ ಕಾಮಗಾರಿಗಳ ಪಟ್ಟಿ ಕೊಟ್ಟರು. ಇದರನ್ವ ಮೂಲಭೂತ ಸೌಕರ್ಯಗಳು ಸೇರಿದಂತೆ ಕಾಮಗಾರಿಯ ಯೋಜನೆಗೆ ಸಂಬAಧಿಸಿದ ಕ್ರಿಯಾ ಯೋಜನೆಯನ್ನು ತಯಾರಿಸುವ ಬಗ್ಗೆ ಚರ್ಚೆಗಳು ನಡೆದವು.
ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಜತೆಯಲ್ಲಿ ಶುಚಿತ್ವಕ್ಕೆ ಹೆಚ್ಚು ಗಮನ ಹರಿಸುವ ಬಗ್ಗೆ ಚರ್ಚೆಗಳು ನಡೆದವು. ಅಲ್ಲದೆ ಮಳೆಗಾಲ ಆರಂಭ ವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಗ್ರಾಮ ಪಂಚಾಯತಿ ವತಿಯಿಂದ ಕೈಗೊಳ್ಳಲಾಗುವ ಬಗ್ಗೆ ವಿವಿಧ ಹಂತಗಳಲ್ಲಿ ಚರ್ಚೆ ನಡೆದವು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಸÀರ್ಕಾರದ ಹೊಸ ಯೋಜನೆಗಳ ಬಗ್ಗೆ ಮತ್ತು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸಭೆಗೆ ಒದಗಿಸಿದರು. ಅಧ್ಯಕ್ಷತೆ ವಹಿಸಿದ್ದ ಶೋಭಾ ಪ್ರಕಾಶ್ ಮಾತಾನಾಡಿ ಸದಸ್ಯರ ಅಭಿಪ್ರಾಯಗಳನ್ನು ಈಗಾಗಲೇ ಸಭೆಯ ನಡವಳಿಕೆಯ ಪುಸ್ತಕದಲ್ಲಿ ನೋಂದಣಿ ಮಾಡಲಾಗಿದೆ. ಅದರನ್ವಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ, ಅದರ ಮೂಲಕ ಕಾಮಗಾರಿಗಳನ್ನು ಕಾರ್ಯಗತಗೊಳಿಸಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ರೂಪ ಮಹೇಶ್, ಸದಸ್ಯರಾದ ಶಿವಕುಮಾರ್, ದೇವರಾಜ್, ನಿಂಗಜಾಮ್ಮ ತೀರ್ಥಾನಂದ, ಮಹದೇವ, ಸಿಬ್ಬಂದಿ ವರ್ಗ ಇದ್ದರು.