ಕಾಲೇಜು ಪೋಷಕರ ಸಭೆ

meet
Published on

ಕುಶಾಲನಗರ;

ಸಮೀಪದ ಕೂಡಿಗೆ ಕೃಷಿ ಫಾರಂ ಆವರಣದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು. ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಚ್.ಕೆ. ಸೋಮಶೇಖರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಸರ್ಕಾರಿ ಕಾಲೇಜಿನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ವಿವಿಧ ಸೌಲಭ್ಯಗಳು ಸಿಗುತ್ತಿದ್ದು,ಈ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.

ಸAಸ್ಥೆಯ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ಉತ್ತಮ ಸಂಸ್ಕಾರಗಳನ್ನ ಕಲಿಯಬೇಕು. ಸರ್ಕಾರದ ವತಿಯಿಂದ ಸಿಗುವ ವಿದ್ಯಾರ್ಥಿ ವೇತನದ ಹಾಗೂ ಕಾಲೇಜಿನ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಕಾಲೇಜಿಗೆ ಗೈರು ಹಾಜರಿ ಆಗದೆ ಪ್ರತಿದಿನ ತರಗತಿಗೆ ಬರಬೇಕು. ಉತ್ತಮ ಫಲಿತಾಂಶ ಬರಲು ಪೋಷಕರು, ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಪಾತ್ರ ಬಹು ಮುಖ್ಯವಾಗಿದೆ ಎಂದರು.

ಹಿರಿಯ ಉಪನ್ಯಾಸಕ ನಾಗಪ್ಪ ಯಾಲಕ್ಕಿಕಟ್ಟೆ ಮಾತನಾಡಿ, ಕಾಲೇಜಿನಲ್ಲಿ ಶಿಸ್ತು ನಿಯಮಾವಳಿಗಳಿಗೆ ಎಲ್ಲರೂ ಬದ್ಧರಾಗಿರಬೇಕು. ಅದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಪೋಷಕರಿಗೆ ಸ್ಪಷ್ಟಪಡಿಸಿದರು.

ಈ ಸಂದರ್ಭ ಕಾಲೇಜಿನ ಹಿರಿಯ ಉಪನ್ಯಾಸಕರಾದ ರಮೇಶ್, ಸತೀಶ್, ಕಾವೇರಮ್ಮ, ರವೀಶ್, ಹನುಮರಾಜು, ಲೀನೆಟ್ ಸೂಜಿ, ಪೋಷಕರು ಹಾಗೂ ಸಿಬ್ಬಂದಿ ವರ್ಗ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net