ಹಾರಂಗಿಯಿಂದ ಕಾಲುವೆಗಳಿಗೆ ನೀರು ಬಿಡುಗಡೆ

Meet
Published on

ಮಡಿಕೇರಿ:

ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು  ಅಧ್ಯಕ್ಷತೆಯಲ್ಲಿ

ಗುರುವಾರ ನಡೆಯಿತು.ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ  ಶಾಸಕ ಡಾ. ಮಂತರ್ ಗೌಡ  ಉಪಸ್ಥಿತರಿದ್ದರು.

ಹಾರಂಗಿ ಅಚ್ಚುಕಟ್ಟು ಪ್ರದೇಶಗಳ ಸ್ಥಿತಿಗತಿ, ಜಲಾಶಯದ ಪ್ರಸ್ತುತ ನೀರಿನ ಮಟ್ಟದ ಬಗ್ಗೆ ಅಧಿಕಾರಿಗಳಿಂದ ಈ ವೇಳೆಸಮಗ್ರ ಮಾಹಿತಿ ಪಡೆಯಲಾಯಿತು.

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಯೋಜಿತವಾಗಿ ನಾಲೆಗಳಿಗೆ ನೀರು ಹರಿಸುವ ಮೂಲಕ, ಸಮಪರ್ಕವಾಗಿ ನೀರಿನ ನಿರ್ವಹಣೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಸಭೆಯಲ್ಲಿ ಅರಕಲಗೂಡು ಶಾಸಕ ಎ.ಮಂಜು, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net