ಕೂಡುಮಂಗಳೂರು ಗ್ರಾ.ಪಂ. ವಿಶೇಷ ಸಭೆ

meet
Published on

ಕುಶಾಲನಗರ:

ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ನಿವೇಶನ ರಹಿತರ ಪಟ್ಟಿಯನ್ನು ಪರಿಶೀಲನೆ ನಡೆಸುವ ದೃಷ್ಟಿಯಿಂದ ಕೂಡುಮಂಗಳೂರು ಗ್ರಾ.ಪಂ. ಉಪಾಧ್ಯಕ್ಷೆ ಶಶಿಕಲಾ ಅಧ್ಯಕ್ಷತೆಯಲ್ಲಿ ಬುಧವಾರ ವಿಶೇಷ ಸಭೆ ನಡೆಯಿತು. ಕೂಡುಮಂಗಳೂರು ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈಗಾಗಲೇ ತಯಾರಿಸಿರುವ ಗ್ರಾ.ಪಂ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರ ಪಟ್ಟಿಯನ್ನು ಆಯಾ ವಾರ್ಡಿನ ಸದಸ್ಯರು ಪರಿಶೀಲಿಸಿದರು.

ಪಟ್ಟಿಯಲ್ಲಿ ಅರ್ಹ ಫಲಾನುಭವಿಗಳ ಜತೆಗೆ ಅನರ್ಹರು ಕೂಡ ಇದ್ದ ಕಾರಣ, ನಿವೇಶನ ರಹಿತರ ಪಟ್ಟಿಯನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಲು ಸಮಯಾವಕಾಶ ನೀಡುವಂತೆ ಪಂಚಾಯಿತಿ ಸದಸ್ಯರು ಆಗ್ರಹಿಸಿದರು. ಪ್ರಸ್ತುತ ತಯಾರಾಗಿರುವ ಪಟ್ಟಿಯು 2017 ರ ಪಟ್ಟಿಯಾಗಿರುವ ಹಿನ್ನೆಲೆ ಹಾಲಿ ಪಟ್ಟಿಯ ಜತೆಗೆ ಹೊಸದಾಗಿ ಅರ್ಜಿ ಹಾಕಲು ಅವಕಾಶ ಕಲ್ಪಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಪಂಚಾಯಿತಿ ಸೂಚ್ಯಂಕದ ಬಗ್ಗೆ ಇದೇ ವೇಳೆ ಪಿಡಿಓ ಸಂತೋಷ್ ಸಭೆಗೆ ಮಾಹಿತಿ ನೀಡಿದರು. ಗ್ರಾ.ಪಂ ವ್ಯಾಪ್ತಿಯ ವಿವಿಧ ಇಲಾಖೆಗಳಿಂದ ಲಭಿಸಿದ ಮಾಹಿತಿಯನ್ನು ಸಭೆಗೆ ತಿಳಿಸಿ, ಸಭೆಯ ಅನುಮೋದನೆ ಪಡೆಯಲಾಯಿತು. ಈ ಸಂದರ್ಭ ಕೂಡುಮಂಗಳೂರು ಗ್ರಾ.ಪಂ ಸದಸ್ಯರು ಹಾಗೂ ಪಂಚಾಯಿತಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net