

ಮಡಿಕೇರಿ:
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ಕುಶಾಲನಗರ ತಾಲೂಕು ಸಭಾಂಗಣದಲ್ಲಿ ಗುರುವಾರ ನಡೆಯಿತು.
ಆರಂಭದಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ವರದಿಯನ್ನು ಓದುವ ಮೂಲಕ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳ ಜತೆಯಲ್ಲಿ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮಖರಾಗಿರುತ್ತಾರೆ ಎಂಬುದರ ಬಗ್ಗೆ ಚರ್ಚೆಗಳು ನಡೆದವು.
ನಂತರ ಯುವ ಶಕ್ತಿ ಯೋಜನೆ ಸಂಪೂರ್ಣವಾಗಿ ತಾಲೂಕಿನಲ್ಲಿ ಕಾರ್ಯಗತಗೊಳಿಸಲು ಮತ್ತು ಯುವಕರಿಗೆ ಸಮರ್ಪಕವಾಗಿ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಸಂಬAಧಿಸಿದ ಇಲಾಖೆಯವರು ಯುವ ಮೇಳವನ್ನು ಮುಂದಿನ ದಿನಗಳಲ್ಲಿ ಆಯೋಜಿಸುವಂತೆ ವಿ.ಪಿ. ಶಶಿಧರ್ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗೆ ಸೂಚನೆ ನೀಡಿದರು.
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ವಿತರಣೆಯಾದ ಪಡಿತರ ವಸ್ತುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಖರೀದಿಸುತ್ತಿದ್ದ ಸಂದರ್ಭದಲ್ಲಿ ಪಡಿತರ ವಸ್ತುಗಳನ್ನು ವಶ ಪಡೆದುಕೊಂಡು ಕಾನೂನು ಕ್ರಮ ತೆಗೆದುಕೊಂಡ ಆಹಾರ ಇಲಾಖೆಯ ತಾಲೂಕು ಅಹಾರ ಪರಿವೀಕ್ಷಣಾ ಅಧಿಕಾರಿ ಸ್ವಾತಿ ಅವರ ಕಾರ್ಯ ವೈಖರಿಯನ್ನು ಗುರುತಿಸಿ ಶ್ಲಾಘಿಸಿಲಾಯಿತು. ಈಗಾಗಲೇ ಸೆಸ್ಕ್ ವಿದ್ಯುತ್ ಕೇಂದ್ರ ವತಿಯಿಂದ ನಡೆಯುತ್ತಿರುವ ನೂತನ ಕಂಬಗಳ ಅಳವಡಿಕೆ ಮತ್ತು ಬದಲಿ ವೈರ್ ಅಳವಡಿಕೆ ಸಮರ್ಪಕವಾಗಿ ರಸ್ತೆಯ ಹದ್ದಬಸ್ತು ಬಿಟ್ಟು ಅಳವಡಿಕೆ ಕಾರ್ಯ ನಡೆಯಬೇಕಾಗಿದೆ ಎಂದು ವಿದ್ಯುತ್ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು.
ವಿ.ಪಿ. ಶಶಿಧರ್ ಮಾತಾನಾಡಿ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಯುವ ನಿಧಿ ಯೋಜನೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜತೆಯಲ್ಲಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರಪೇಟೆ ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ತಾಲ್ಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣೇಗೌಡ, ಹೆಚ್.ಎನ್. ರಾಜಶೇಖರ್, ಶ್ರೀನಿವಾಸನ್, ಕುಮಾರ್, ಅಬ್ದುಲ್ ರಜಾಕ್, ರಫೀಕ್ ಖಾನ್ , ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್ ಕುಶಾಲನಗರ ತಾಲೂಕು ಅಹಾರ ಪರಿವೀಕ್ಷಣಾ ಅಧಿಕಾರಿ ಎಂ.ಎಸ್. ಸ್ಬಾತಿ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀ ದೇವಿ, ಸೆಸ್ಕ್ ಎಂಜಿನಿಯರ್ ಸೋಮೇಶ್ ಮತ್ತಿತರರು ಸಭೆಯಲ್ಲಿ ಇದ್ದರು.