ಗಣರಾಜ್ಯೋತ್ಸವ ಆಚರಣೆಯ ಪೂರ್ವ ಸಿದ್ಧತಾ ಸಭೆ

meet
Published on

ಮಡಿಕೇರಿ:

ಜ. 26 ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ಕಳೆದ ಬಾರಿಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟಿçÃಯ ಹಬ್ಬವಾದ ಗಣರಾಜ್ಯೋತ್ಸವವನ್ನು ಜವಾಬ್ದಾರಿಯುತವಾಗಿ ಆಚರಿಸಬೇಕು. ಕಳೆದ ಬಾರಿಯಂತೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಿಸುವಂತೆ ಸಂಬAಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಹೊಸ ಹೊಸ ತಂಡಗಳಿಗೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ಸರ್ಕಾರಿ ಹಾಗೂ ಬಾಲಕ ಮತ್ತು ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿಗಳಿಗೆ ಅವಕಾಶ ಮಾಡಬೇಕು. ತಮ್ಮ ತಮ್ಮ ಕಚೇರಿಗಳಲ್ಲಿ ಅಂದು(ಜ.26) ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡಿ 8.45 ಗಂಟೆಗೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ಹಾಜರಾಗಬೇಕು ಎಂದು ಸೂಚಿಸಿದರು.

ರಾಷ್ಟç ಹಾಗೂ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದ ಹಾಗೂ ವಿಶಿಷ್ಟ ಸಾಧನೆ ಮಾಡಿರುವವರನ್ನು ಗುರುತಿಸಿ ಜ.18 ರೊಳಗೆ ಮಾಹಿತಿ ನೀಡುವಂತಾಗಬೇಕು. ಲ್ಯಾಪ್‌ಟಾಪ್ ವಿತರಣೆ ಮತ್ತಿತರ ಮಾಹಿತಿ ಒದಗಿಸುವಂತೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಹಬ್ಬದ ವಾತಾವರಣದಲ್ಲಿ ಗಣರಾಜ್ಯೊತ್ಸವವನ್ನು ಆಚರಿಸುವಂತಾಗಬೇಕು. ಮಾಜಿ ಸೈನಿಕರನ್ನು ಆಹ್ವಾನಿಸುವುದು ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಪಥಸಂಚಲನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಗಣರಾಜ್ಯೋತ್ಸವ ಸಂಬAಧ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಘಟಕರಾದ ದಮಯಂತಿ ಅವರು ಮಾತನಾಡಿ ಗಣರಾಜ್ಯೋತ್ಸವ ಪೂರ್ವಭಾವಿಯಾಗಿ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗುತ್ತಿದ್ದು ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.

ಭಾರತ್ ಸೇವಾದಳದ ಮೋಂತಿ ಗಣೇಶ್ ಅವರು ಮಾತನಾಡಿ ಭಾರತ ಸೇವಾದಳ ವತಿಯಿಂದ ಧ್ವಜಾರೋಹಣ ಸಂಬAಧ ಹಲವು ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಪ್ರೊಬೆಷನರಿ ಐಪಿಎಸ್ ಅಧಿಕಾರಿ ಬೆನಕ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಜಿ.ಪಂ.ಉಪಕಾರ್ಯದರ್ಶಿ ಎಸ್.ಧನರಾಜ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net