

ಮಡಿಕೇರಿ:
ಬೆಂಗಳೂರಿನ ಕಾವೇರಿ ಭವನದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇತೃತ್ವದಲ್ಲಿ ಅಲ್ಪಸಂಖ್ಯಾತರ ಮೂಲ ಸೌಕರ್ಯಗಳ ಕುರಿತು ಸಭೆ ನಡೆಯಿತು. ವಿರಾಜಪೇಟೆ ಕ್ಷೇತ್ರದಲ್ಲಿ ಮಸೀದಿ ದುರಸ್ತಿ, ರಸ್ತೆಗಳು, ವಿದ್ಯಾರ್ಥಿ ವೇತನ, ಮೂಲಭೂತ ಸೌಕರ್ಯಗಳು, ಹೆಚ್ಚುವರಿಯಾಗಿ ಮನೆಗಳನ್ನು ಮಂಜೂರು ಮಾಡಲು ಶಾಸಕರು ಹಾಗೂ ಮುಖಂಡರು ಮನವಿ ಸಲ್ಲಿಸಿದರು.
ಈ ಬಗ್ಗೆ ಸಚಿವ ಜಮೀರ್ ಅಹಮ್ಮದ್ ಪ್ರತಿಕ್ರಿಯಿಸಿ, ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತರ ಮೂಲಭೂತ ಸೌಕರ್ಯಕ್ಕೆ 3.5 ಕೋಟಿ ರೂ. ಅನುದಾನ ನೀಡಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ ಅಡಿ ಹಾಗೂ ಬಸವ ವಸತಿ ಯೋಜನೆ ಅಡಿ 1200 ಮನೆಗಳನ್ನು ನೀಡಲಾಗಿದೆ.ಎ.ಎಸ್ ಪೊನ್ನಣ್ಣ ಮನವಿ ಮೇರೆಗೆ 4 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಅಭಿವೃದ್ಧಿಗಾಗಿ ನೀಡುವುದಾಗಿ ಭರವಸೆ ನೀಡಿದರು. ಡಾ|. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ ಅಡಿ ಮತ್ತು ಬಸವ ವಸತಿ ಯೋಜನೆ ಅಡಿ ಹೆಚ್ಚುವರಿಯಾಗಿ 1,000 ಮನೆಗಳನ್ನು ನೀಡುವ ಭರವಸೆ ನೀಡಿದರು.