

ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ನಿಗದಿಪಡಿಸಲಾಗಿದ್ದ ಗುರಿಗಿಂತ ಅರ್ಜಿಗಳು ಸಲ್ಲಿಕೆಯಾಗಿರುವುದು ಕಡಿಮೆಯಾಗಿದ್ದು, ಈ ಸಂಬAಧ ತಳಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಸ್ಪಷ್ಟ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಅಲೆಮಾರಿ ಅಭಿವೃದ್ಧಿ ನಿಗಮದಿಂದ ನೀಡಲಾಗುವ ಸ್ವಯಂ ಉದ್ಯೋಗ, ಉದ್ಯಮಶೀಲತಾ, ಸ್ವಾವಲಂಬಿ ಸಾರಥಿ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಗಳಡಿ ನಿಗದಿತ ಗುರಿಗಿಂತ ಅರ್ಜಿಗಳ ಸಲ್ಲಿಕೆ ಕಡಿಮೆಯಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಪ್ರಗತಿ ಸಾಧಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಯಾಯ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೇ ಅಗತ್ಯ ಕ್ರಮಕೈಗೊಳ್ಳಬೇಕು. ಬೇರೆ ಜಿಲ್ಲೆಗಳಲ್ಲಿ ಸಾಲ ಸೌಲಭ್ಯ ಹಾಗೂ ಸಹಾಯಧನ ಪಡೆಯಲು ಮುಂದೆ ಬರುತ್ತಾರೆ. ಆದರೆ ಕೊಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಈ ರೀತಿಯಾದರೆ ಸೂಕ್ಷö್ಮ ಅಲೆಮಾರಿ ಜನಾಂಗದವರ ಬದುಕು ಸುಧಾರಣೆ ಹೇಗೆ ಎಂದು ಅವಲೋಕನ ಮಾಡಬೇಕಿದೆ. ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯದ ನಿವೇಶನ ರಹಿತರಿಗೆ ನಿವೇಶನ ಒದಗಿಸಬೇಕು. ನಿವೇಶನ ಇದ್ದವರಿಗೆ ಮನೆ ನಿರ್ಮಿಸಿಕೊಡಲು ಮುಂದಾಗಬೇಕು. ಅಲೆಮಾರಿ ಅಭಿವೃದ್ಧಿ ನಿಗಮ ಕಾರ್ಯಕ್ರಮಗಳ ಸಂಬAಧಿಸಿದAತೆ ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಬೇಕು. ಆದಿವಾಸಿಗಳು ಇನ್ನೂ ಸಹ ಅರಣ್ಯ ಪ್ರದೇಶದಲ್ಲಿ ವಾಸ ಮಾಡುತ್ತಿದ್ದು, ಅವರ ಮಕ್ಕಳಿಗೆ ಶಿಕ್ಷಣ ನೀಡಿದ್ದಲ್ಲಿ ಬದಲಾವಣೆ ಸಾಧ್ಯ.
ಒಂದು ಜನರೇಷನ್ ಶಿಕ್ಷಣ ಪಡೆದಲ್ಲಿ ಅರಣ್ಯದಿಂದ ಹೊರಬರಲು ಇಷ್ಟ ಪಡುತ್ತಾರೆ. ಆದ್ದರಿಂದ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಬೇಕು. ಬಾಲ್ಯವಿವಾಹ ತಡೆಯಬೇಕು. ಬಸವನಹಳ್ಳಿಯ ಮೇದಾರ ಕಾಲೋನಿ, ದಿಡ್ಡಳ್ಳಿಯ ಪುನರ್ ವಸತಿ ಕೇಂದ್ರ, ದೊಡ್ಡಬೆಟ್ಟಗೇರಿಯ ಸೋಲಿಗ ಕಾಲೋನಿ, ತಿತಿಮತಿ ವ್ಯಾಪ್ತಿಯ ಬೊಂಬುಕಾಡು, ಮಾಲ್ದಾರೆ ವ್ಯಾಪ್ತಿಯ ಆಸ್ತನಹಾಡಿ, ಮದೆನಾಡು ಗ್ರಾ.ಪಂ.ವ್ಯಾಪ್ತಿಯ ಜೋಡುಪಾಲ ಹೀಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಿವೇಶನ, ಮನೆ ಹಾಗೂ ಮೂಲ ಸೌಲಭ್ಯಕ್ಕೆ ಹೆಚ್ಚಿನ ಜನರು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಸೂಕ್ಷö್ಮ, ಸಣ್ಣ ಹಾಗೂ ಅತಿ ಸಣ್ಣ ಸಮುದಾಯ ಮತ್ತು ಕುಟುಂಬಗಳು ಇದ್ದು, ಶಿಕ್ಷಣ ಇಲ್ಲದಿರುವುದು ಕಂಡು ಬರುತ್ತದೆ. ಆದ್ದರಿಂದ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಅಲೆಮಾರಿ ಜನಾಂಗದವರಿಗೆ ನೀಡಲಾಗುವ ಸೌಲಭ್ಯಗಳನ್ನು ಫೆಬ್ರವರಿ ಅಂತ್ಯದೊಳಗೆ ಪ್ರಗತಿ ಸಾಧಿಸಲಾಗುವುದು. ಅಲೆಮಾರಿ ಸಮುದಾಯಗಳಿಗೆ ಇರುವ ಸೌಲಭ್ಯ ಕಲ್ಪಿಸಲಾಗುವುದು. ನಿವೇಶನ ರಹಿತರಿಗೆ ನಿವೇಶನ, ವಸತಿ ರಹಿತರಿಗೆ ವಸತಿ ಕಲ್ಪಿಸಲು ಆದ್ಯತೆ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್. ಹೊನ್ನೇಗೌಡ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ ತಮ್ಮ ಇಲಾಖೆಗೆ ಸಂಬAಧಿಸಿದ ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ತಹಶೀಲ್ದಾರರು, ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.