ಜಿಪಂ ಸಿಇಒ ಜತೆ ಎಂಎಲ್‌ಸಿ ಚರ್ಚೆ

28dvk 1
Published on

ಬೆಳಗಾವಿ: ಗ್ರಾಮ ಪಂಚಾಯಿತಿ ಹಂತದಲ್ಲಿ ಆಗಬೇಕಿರುವ ಕೆಲಸಗಳಿಗೆ ಚುರುಕು ನೀಡಿ ಆದಷ್ಟು ಬೇಗ ಪೂರ್ಣಗೊಳಿಸುವ ಸಂಬಂಧ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಜತೆ ಮಂಗಳವಾರ ಚರ್ಚೆ ನಡೆಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಹಾಗೂ ಅಧ್ಯಕ್ಷರ ಹಂತದಲ್ಲಿನ ಬಾಕಿ ಉಳಿದಿರುವ ಅಭಿವೃದ್ಧಿ ಕೆಲಸಗಳ ಮಾಹಿತಿ ಪಡೆದು, ಯಾವುದೇ ಕೆಲಸ ಬಾಕಿ ಉಳಿಯದಂತೆ ನಿಗಾ ವಹಿಸಲು ಆಯಾ ಪಿಡಿಒ ಹಾಗೂ ಅಧ್ಯಕ್ಷರಿಗೆ ಮಾರ್ಗದರ್ಶನ ಹಾಗೂ ಸೂಚನೆ ನೀಡಬೇಕಾದ ಅಗತ್ಯವಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.

ತಕ್ಷಣ ಈ ಬಗ್ಗೆ ಗಮನ ಹರಿಸಲು ಸಂಬಂಧಿಸಿದವರಿಗೆ ಸೂಚಿಸುವುದಾಗಿ ರಾಹುಲ್ ಶಾಂಧೆ ಪ್ರತಿಕ್ರಿಯೆಸಿದದರು. ಜಿಪಂ ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net