

ಉಳ್ಳಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಯ ವಿಧಾನಪರಿಷತ್ ಉಪಚುನಾವಣೆ ಕಾರ್ಯ ಚಟುವಟಿಕೆಗಳ ಬಗ್ಗೆ ಭಾನುವಾರ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು.
ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಕಾರ್ಕಳದ ಶಾಸಕ ಸುನೀಲ್ ಕುಮಾರ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಅಭ್ಯರ್ಥಿ ಕಿಶೋರ್ ಕುಮಾರ್ ಮಾತನಾಡಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಕ್ ಯು., ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಡಾ.ಧನಂಜಯ್ ಸರ್ಜಿ, ಚುನಾವಣಾ ಸಂಚಾಲಕ ಕ್ಯಾ.ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಮಾಜಿ ಶಾಸಕರು, ಜಿಲ್ಲೆಯ ಪ್ರಮುಖರು, ಚುನಾವಣಾ ಕಾರ್ಯನಿರ್ವಹಣಾ ತಂಡದ ಪ್ರಮುಖರು ಉಪಸ್ಥಿತರಿದ್ದರು.