

ವಿಜಯಪುರ: ಜಿಲ್ಲಾದ್ಯಂತ ಆಗಸ್ಟ್ ತಿಂಗಳಿನಲ್ಲಿ ಆಚರಿಸಲಾಗುವ ಗೌರಿ ಗಣೇಶ ಚತುರ್ಥಿ ಉತ್ಸವದಲ್ಲಿ ಪರಿಸರಸ್ನೇಹಿ ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆ ಕುರಿತು ಇಲ್ಲಿನ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಸಭಾಭವನದಲ್ಲಿ ಜು. 25 ರಂದು ಬೆಳಗ್ಗೆ 11 ಗಂಟೆಗೆ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಾರ್ವಜನಿಕರು ತಮ್ಮ ಮನೆ ಹಾಗೂ ಬಡಾವಣೆಗಳಲ್ಲಿ ಜೇಡಿ&ಇತರೆ ಮಣ್ಣಿನಿಂದ ತಯಾರಿಸಲಾದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದು ಹಾಗೂ ವಿಗ್ರಹಗಳನ್ನು ಪಾಲಿಕೆಯಿಂದ ನಿರ್ಮಿಸಲಾದ ಕೃತಕ ಹೊಂಡಗಳು, ಸಂಚಾರಿ ಗಣೇಶ ವಿಸರ್ಜನಾ ವಾಹನಗಳಲ್ಲಿ ವಿಸರ್ಜಿಸುವ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಸಭೆ ಆಯೋಜಿಸಲಾಗಿದೆ.
ಸಭೆಗೆ ಸಾರ್ವಜನಿಕರು, ಪ್ರತಿನಿಧಿಗಳು, ಗಣೇಶ ಮಹಾಮಂಡಳಿ ಮತ್ತು ಮಂಡಳಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣೇಶ ವಿಗ್ರಹ ಮಾರಾಟಗಾರರು ಹಾಗೂ ಸಂ&ಸಂಸ್ಥೆಗಳು ಭಾಗವಹಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.