ಅಂಗವಿಕಲರ ಕುಂದುಕೊರತೆ: ಫೆ.21ರಂದು ಡಿಸಿ ಅಧ್ಯಕ್ಷತೆಯಲ್ಲಿ ಸಭೆ

disabled
Published on

ಮಂಡ್ಯ: ಅಂಗವಿಕಲರ ಕುಂದುಕೊರತೆ ಆಲಿಸಿ ಪರಿಹಾರೋಪಾಯ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಫೆ.21ರಂದು ಬೆಳಗ್ಗೆ 10ಗಂಟೆಗೆ ನಗರದ ಗುರುಭವನದಲ್ಲಿ ಸಭೆ ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಸಭೆಯಲ್ಲಿ ಅಂಗವಿಕಲರ ಶ್ರಮಿಸುತ್ತಿರುವ ಸಂಘ ಸಂಸ್ಥೆಯ ಮುಖಂಡರು ಹಾಗೂ ಅಂಗವಿಕಲರು ಭಾಗವಹಿಸಿ ತಮ್ಮ ಸಲಹೆ, ಸೂಚನೆ ನೀಡಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net