ಕಾಲಮಿತಿಯೊಳಗಾಗಿ ಜನನ ಮರಣ ನೋಂದಣಿ ಕಾರ್ಯ ಜರುಗಲಿ: ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ

20GDG05
Published on

ವಿಜಯವಾಣಿ ಸುದ್ದಿಜಾಲ ಗದಗ
ಜನನ ಮರಣ ನೋಂದಣಿ ವೈಯಕ್ತಿಕ ಅನುಕೂಲಕ್ಕಾಗಿ ಮತ್ತು ಸಾಮಾಜಿಕ ಸ್ಥಾನಮಾನಕ್ಕೆ ಸುರತೆಯನ್ನು ಒದಗಿಸಲು ಪ್ರಮುಖ ದಾಖಲೆಯಾಗಿದ್ದು, ಜನನ&ಮರಣ ನೋಂದಣಿಯನ್ನು ಕಾಲಮಿತಿ ಒಳಗಾಗಿ ದಾಖಲಿಸಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಜನನ&ಮರಣ ಸಮನ್ವಯ ಸಮಿತಿ ಸಭೆಯ ಅಧ್ಯತೆ ವಹಿಸಿ ಮಾತನಾಡಿದ ಅವರು, ನೋಂದಣಿಗಾಗಿ ನಿಯೋಜಿತ ನೋಂದಣಾಧಿಕಾರಿಗಳು ಪ್ರಮಾಣ ಪತ್ರಕ್ಕೆ ಸಹಿ ಮಾಡುವುದರ ಮೂಲಕ ನೋಂದಣಿಗಾಗಿ ನಿಗದಿಪಡಿಸಲಾದ ತಂತ್ರಾಂಶದಲ್ಲಿ ಕಾಲಮಿತಿ ಒಳಗಾಗಿ ದಾಖಲಿಸಲು ಕ್ರಮ ಕೈಗೊಳ್ಳಬೇಕು. ನೋಂದಣಿ ದಾಖಲಿಸಿ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ತಹಶೀಲ್ದಾರರು ಪ್ರತಿ ಮಾಹೆ ಸಭೆ ಜರುಗಿಸಿ ಸಭೆಯ ವರದಿಯನ್ನು ಜಿಲ್ಲಾಡಳಿತಕ್ಕೆ ತಪ್ಪದೇ ಸಲ್ಲಿಸಬೇಕು ಎಂದರು.
ಬೆಳೆ ಸಮೀೆ ಹಾಗೂ ಬೆಳೆ ಕಟಾವು ಪ್ರಯೋಗ ಕುರಿತು ಸಭೆಯಲ್ಲಿ ಚಚಿರ್ಸಲಾಯಿತು. ಬೆಳೆ ಸಮೀೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕಂದಾಯ ಹಾಗೂ ಕೃಷಿ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಬೆಳೆ ಕಟಾವು ಪ್ರಯೋಗವು ಬೆಳೆ ವಿಮೆಗೆ ಸಂಬಂಧಿಸಿದ್ದಾಗಿದೆ. ಈ ಗಂಭೀರ ವಿಷಯದಲ್ಲಿ ಉದಾಸೀನತೆ, ವಿಳಂಭ ಧೋರಣೆ ತೋರಿದ್ದಲ್ಲಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಂ. ಎ. ಕಂಬಾಳಿಮಠ ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 365, ಪಟ್ಟಣ ಪ್ರದೇಶಗಳಲ್ಲಿ 19 ಒಟ್ಟು 384 ನೋಂದಣಿ, ಉಪನೋಂದಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಜನೇವರಿ 2023 ರಿಂದ 2023 ಜುಲೈ ವರೆಗೆ ಗ್ರಾಮೀಣ ಪ್ರದೇಶದಲ್ಲಿ 994 ಹಾಗೂ ಪಟ್ಟಣ ಪ್ರದೇಶಗಳಲ್ಲಿ 7227 ಸೇರಿ ಒಟ್ಟು 8221 ಜನನ ನೋಂದಣಿ ಆಗಿವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪ್ರಭಾರಿ ಉಪ ವಿಭಾಗಾಧಿಕಾರಿ ಗಂಗಪ್ಪ ಎಂ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ತಾರಾಮಣಿ, ಜಿಲ್ಲಾ ನೋಂದಣಿ ಅಧಿಕಾರಿ ಮಹಾಂತೇಶ ಪಟಗಾರ, ಜಿಲ್ಲಾ ಆರ್​.ಸಿ.ಎಚ್​. ಅಧಿಕಾರಿ ಡಾ. ಬಿ.ಎಂ. ಗೊಜನೂರ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net