ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ

New bjp jds new new
Published on

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಮತ್ತು ಕಾರ್ಯಕರ್ತರ ಸಮನ್ವಯ ಸಭೆಯನ್ನು ನಗರದಲ್ಲಿ ಶನಿವಾರ ಆಯೋಜಿಸಲಾಗಿತ್ತು.

ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಮಾತನಾಡಿ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ಈ ನಿಟ್ಟಿನಲ್ಲಿ ಎರಡೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆ ಕಾರ್ಯದಲ್ಲಿ ತೊಡಗಬೇಕು ಎಂದು ತಿಳಿಸಿದರು.

ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಅಹ್ಮದ್ ಅರಸಿಕೇರಿ ಅಧ್ಯಕ್ಷತೆ ವಹಿಸಿದ್ದರು.

ಜೆಡಿಎಸ್ ಮಹಾನಗರ ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸಿಮರದ, ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಬಿ. ಗಂಗಾಧರಮಠ, ಮಾಜಿ ಸಚಿವ ಕೆ.ಎನ್. ಗಡ್ಡಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಬಿಜೆಪಿ ಹಾಗೂ ಜೆಡಿಎಸ್​ನ ನವೀನಕುಮಾರ ಮಡಿವಾಳರ, ಪ್ರಭು ನವಲಗುಂದಮಠ, ವಿನಾಯಕ ಗಾಡಿವಡ್ಡರ, ಬಾಷಾಸಾಬ ಮುದಗಲ್, ಸಿದ್ದು ಮಹಾಂತ ಒಡೆಯರ,ಪೂರ್ಣಿಮಾ ಸವದತ್ತಿ, ಶ್ರೀಕಾಂತ ತೇಲಗರ, ಶಂಕರ ಪವಾರ ಮುಂತಾದವರು ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net