ಆಡಳಿತ ಸುಧಾರಣಾ ಆಯೋಗದ ಸಭೆ

3 Dwd 4 R.V. Deshpande
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅಧ್ಯಕ್ಷತೆಯಲ್ಲಿ ಸೆ. 4ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಡಳಿತ ಸುಧಾರಣಾ ಆಯೋಗದ ಜಿಲ್ಲಾ ಮಟ್ಟದ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು, ಪಾಲಿಕೆ ಮೇಯರ್, ಜಿಲ್ಲಾಽಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಮಟ್ಟದ ಅಽಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net