

ಮಡಿಕೇರಿ: ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆಯು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.
ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯ ಕುರಿತು ಚರ್ಚಿಸಲಾಯಿತು. ಉಪಾಧ್ಯಕ್ಷ ಶಂಕರ ನಾರಾಯಣ ಹೆಬ್ಬಾರ್ ಸಂಘದ ನಿಧಿ ರಶೀದಿ ೩೫,೦೦೦ ಸಂಗ್ರಹಿಸಿರುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯದರ್ಶಿ ರಂಜಿತ್ ಮಾತನಾಡಿದರು. ಸಂಘದ ಪ್ರಮುಖ ಜೋಸೆಫ್‌ಸೆರಿ ಸ್ವಾಗತಿಸಿದರೆ, ಖಜಾಂಚಿ ಸುರೇಶ್ ವಂದಿಸಿದರು. ಸಭೆಯಲ್ಲಿ ೫೦ಕ್ಕಿಂತ ಹೆಚ್ಚು ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಉಡುಪಿ, ಬಾಗಲಕೋಟೆಯಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಂಚಿನ ಪದಕ ಗೆದ್ದ ತಂಡಕ್ಕೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.