ಗ್ರಾಮೀಣ ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಆ.೨೩ ಕ್ಕೆ ಶಾಸಕರ ಸಭೆ

17 HBH 01
Published on

ಹಗರಿಬೊಮ್ಮನಹಳ್ಳಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸೇವೆಗಳು ಸೌಲಭ್ಯಗಳು ಅನುಷ್ಟಾನಗೊಳಿಸಲು, ಬಾಕಿಯಿರುವ ಕಡತಗಳ ವಿಲೇವಾರಿ ಮಾಡಲು ಆ.೨೩ ರಂದು ಪಟ್ಟಣದ ತಾಪಂ ಶಾಸಕರ ಕಚೇರಿಯಲ್ಲಿ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು.
ಪಟ್ಟಣದ ಅವರ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು, ಉದ್ಯೋಗ ಖಾತ್ರಿ, ಬದುಕು ಖಾತ್ರಿ, ಸೇವೆ ಮತ್ತು ಸೂರು ಎಂಬ ಶೀರ್ಷಿಕೆಯಡಿ ಅಭಿಯಾನ ನಡೆಸಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು, ಇತ್ಯರ್ಥವಾಗದ ಕಡತಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನ ವಿವಿಧ ಇಲಾಖೆಗಳ ಸಮಸ್ಯೆಗಳ ಬಗ್ಗೆ ಜನರಿಂದ ಮಾಹಿತಿ ಪಡೆದು ಶೀಘ್ರ ಪರಿಹಾರಕ್ಕೆ ತ್ವರಿತಗತಿಯಲ್ಲಿ ಸೇವೆ ನೀಡಲು ಸಾರ್ವಜನಿಕವಾಗಿ ಸಭೆಯನ್ನು ಕರೆಯಲಾಗಿದೆ. ಸಾರ್ವಜನಿಕರು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿನಾಕಾರಣ ಸರ್ಕಾರಿ ಕಚೇರಿಗಳನ್ನು ಅಲೆಯುವುದನ್ನು ತಪ್ಪಿಸಿಕೊಳ್ಳಲಿ ಎಂದು ಕರೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net