

ನರಗುಂದ: ಪಟ್ಟಣದ ತಾಪಂ ಸಭಾಭವನದಲ್ಲಿ ಶಾಸಕ ಸಿ.ಸಿ. ಪಾಟೀಲ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಮುಂಗಾರು ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲು ಏ. 17ರಂದು ಮಧ್ಯಾಹ್ನ 1 ಗಂಟೆಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಹಮ್ಮಿಕೊಳ್ಳಲಾಗಿದೆ. ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಲಭ್ಯತೆ ಸ್ಥಿತಿಗತಿ, ಬಿಸಿಲಿನ ತಾಪಮಾನದಿಂದ ಉಂಟಾಗುವ ವಿವಿಧ ಪರಿಣಾಮಗಳ ಕುರಿತು ಅಧಿಕಾರಿಗಳು ಕೈಗೊಳ್ಳಬೇಕಾದ ಮುನ್ನೆಚರಿಕೆ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಹಾಜರಿರಬೇಕು ಎಂದು ತಹಸೀಲ್ದಾರ್ ಶ್ರೀಶೈಲ ತಳವಾರ ತಿಳಿಸಿದ್ದಾರೆ.