ಪ್ರಗತಿಪರ ಸಂಘಟನೆಗಳ ಸಭೆ ನಾಳೆ

11M.D.R.6 NA.LI.KRISHN
ನ.ಲಿ.ಕೃಷ್ಣ
Published on

ಮದ್ದೂರು: ಭೀಕರ ಬರಗಾಲದ ಹಿನ್ನೆಲೆಯಲ್ಲಿ ಪರಿಣಾಮಕಾರಿಯಾಗಿ ಬರ ನಿರ್ವಹಣೆ ಮಾಡಲು ಅನುಸರಿಸಬಹುದಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಮೇ.13 ರಂದು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ ಪ್ರಗತಿ ಪರ ಸಂಘಟನೆಗಳ ಸಭೆ ಕರೆದಿದೆ ಎಂದು ಪ್ರಗತಿ ಪರ ಸಂಘಟನೆಗಳ ಮುಖ್ಯಸ್ಥ ನ.ಲಿ.ಕೃಷ್ಣ ತಿಳಿಸಿದ್ದಾರೆ.

ಈ ಸಂಬಂಧ ತಾಲೂಕು ದಂಡಾಧಿಕಾರಿಗಳನ್ನು ಭೇಟಿಮಾಡಿ ಪರಿಣಾಮಗಳನ್ನು ಮನದಟ್ಟು ಮಾಡಿಕೊಡಲಾಗಿತ್ತು. ಇದರ ಬೆನ್ನಲ್ಲೇ ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಈ ಸಭೆ ಕರೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net