ಮಾ.10 ಮತ್ತು 11ರಂದು ಸರ್ಕಾರಿ ನೌಕರರ ಕ್ರೀಡಾಕೂಟ: ಎಡಿಸಿ ಬಿ.ಸಿ.ಶಿವಾನಂದಮೂರ್ತಿ ಹೇಳಿಕೆ

Meeting on Government Employees Sports Mandya
Published on

ಮಂಡ್ಯ: ನಗರದಲ್ಲಿ ಮಾ.10 ಮತ್ತು 11ರಂದು ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೌಕರರು ತಮ್ಮ ಕೆಲಸದ ಜತೆಗೆ ವ್ಯಾಯಮ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿ ಕೆಲಸ ನಿರ್ವಹಿಸಬಹುದು. ಈ ಹಿನ್ನೆಲೆಯಲ್ಲಿ ಕ್ರೀಡಾಕೂಟಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂದರು.

10ರಂದು ಬೆಳಗ್ಗೆ 8 ಗಂಟೆಗೆ ಕ್ರೀಡಾಕೂಟವನ್ನು ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಲಾಗುವುದು. ಭಾಗವಹಿಸುವ ನೌಕರರಿಗೆ ಹಾಜರಾತಿ ಪತ್ರ ನೀಡಲಾಗುವುದು. ವಿವಿಧ ಕ್ರೀಡಾ ಸ್ಪರ್ಧೆಗಳು ಸರ್‌ಎಂವಿ ಕ್ರೀಡಾಂಗಣ ಮತ್ತು ಕ್ರಿಕೆಟ್ ಪಂದ್ಯಾವಳಿ ಪಿಇಎಸ್ ಕಾಲೇಜು ಕ್ರೀಡಾಂಗಣದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಕೆ.ಆರ್.ಪೇಟೆಯಿಂದ ಬರುವ ನೌಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಪೊಲೀಸ್ ಇಲಾಖೆ ವತಿಯಿಂದ ಭದ್ರತಾ ವ್ಯವಸ್ಥೆ, ಆರೋಗ್ಯ ಇಲಾಖೆ ವತಿಯಿಂದ ಪ್ರಥಮ ಚಿಕಿತ್ಸೆ, ಆಂಬ್ಯುಲೆನ್ಸ್ ಸೇವೆ ಒದಗಿಸಿ. ವಿವಿಧ ಇಲಾಖೆಗೆ ವೇದಿಕೆ, ಧ್ವನಿವರ್ಧಕ ನಿರ್ವಹಣೆ, ಕುಡಿಯುವ ನೀರಿನ ನಿರ್ವಹಣೆ, ಊಟ, ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net