ಹುಬ್ಬಳ್ಳಿ: ಇಲ್ಲಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಜಿ.ಎಂ. ಗಂಗಾಧರಸ್ವಾಮಿ ಅವರು ಜುಲೈ 6ರಂದು ಬೆಳಗ್ಗೆ 11ಕ್ಕೆ ಭೇಟಿ ನೀಡಲಿದ್ದು, ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ.
ವರ್ತಕರ ಸಂಘ, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಎಪಿಎಂಸಿ ಸದಸ್ಯರೊಂದಿಗೆ ರಾಜ್ಯ ಮಟ್ಟದ ಸಂವಾದ ಹಮ್ಮಿಕೊಳ್ಳಲಾಗಿದೆ. ತಮ್ಮ ಭಾಗದ ಮಾರುಕಟ್ಟೆಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಎಪಿಎಂಸಿ ವರ್ತಕರು, ಸದಸ್ಯರು ಭಾಗವಹಿಸಿ ಸಂವಾದ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಪ್ರಕಟಣೆ ಕೋರಿದೆ.