ಅಕ್ರಮಗಳ ತನಿಖೆಗೆ ಸದಸ್ಯರ ಪಟ್ಟು

1004560366
Published on

ಬೇವೂರು ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ

ಚನ್ನಪಟ್ಟಣ

ಗ್ರಾಪಂನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬೇವೂರು ಗ್ರಾಪಂನ ಸದಸ್ಯರು ಹಾಗೂ ಸಾರ್ವಜನಿಕರು ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಚನ್ನಪಟ್ಟಣ ಗ್ರಾಪಂನ ಅಧ್ಯಕ್ಷೆ ಮತ್ತು ಪಿಡಿಒ ದುರಾಡಳಿತ, ಅಕ್ರಮ, ಅವ್ಯವಹಾರ, ಭ್ರಷ್ಟಾಚಾರ ಮತ್ತು ಸರ್ಕಾರಿ ಹಣ ದುರುಪಯೋಗ ಮಾಡಿದ್ದು, ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಈ ವೇಳೆ ವಾತನಾಡಿದ ಸದಸ್ಯ ಶಿವರಂಜನ್, ಅಧ್ಯಕ್ಷರ ಅಧಿಕಾರ ಅವಧಿಯಲ್ಲಿ ಸಾರ್ವಜನಿಕರ ಕೆಲಸಗಳು ನಡೆಯುತ್ತಿಲ್ಲ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ, ಪಂಚಾಯಿತಿಯಲ್ಲಿ ಅಧ್ಯಕ್ಷರು ಮತ್ತು ಪಿಡಿಒ ಸೇರಿ ಅಕ್ರಮ ಕಾಮಗಾರಿ, ನಕಲಿ ಬಿಲ್ ಸೃಷ್ಟಿಸಿ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಜತೆಗೆ ವರ್ಗ 1 ಮತ್ತು 15ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ ಕೆಲಸ ವಾಡದೇ ನಕಲಿ ಬಿಲ್ ಸೃಷ್ಟಿಸಿಕೊಂಡು ಸುವಾರು 1 ಕೋಟಿಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿದರು.

ಸದಸ್ಯರ ವೇತನ ಅನುದಾನದಲ್ಲಿ 16 ಮಂದಿ ಸದಸ್ಯರ ಪೈಕಿ 6 ಮಂದಿ ಬೆಂಬಲಿಗ ಸದಸ್ಯರಿಗೆ ವಾತ್ರ ವೇತನ ಸಂದಾಯ ವಾಡಿದ್ದಾರೆ.10 ಮಂದಿ ಸದಸ್ಯರಿಗೆ ವೇತನ ಸಂದಾಯ ವಾಡದೇ ಪಕ್ಷಪಾತ ವಾಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಅಧ್ಯಕ್ಷರು ಹಾಗೂ ಪಿಡಿಒ ಇಬ್ಬರ ದುರಾಡಳಿತದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಲಿಖಿತವಾಗಿ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಕ್ಷೇತ್ರದ ಶಾಸಕರು ಹಾಗೂ ಜಿಪಂ ಸಿಇಒ, ತಾಪಂ ಇಒ ಅಹವಾಲು ಕೇಳಿ ನ್ಯಾಯ ದೊರಕಿಸಿಕೊಡಬೇಕು. ಅವರು ಬರುವವರೆಗೆ ನಮ್ಮ ಹೋರಾಟ ನಿರಂತರವಾಗಿ ಸಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net