ದೇವಸ್ಥಾನ ಆವರಣ ಸ್ವಚ್ಛಗೊಳಿಸಿದ ಸ್ವಸಹಾಯ ಸಂಘದ ಸದಸ್ಯರು

14sunti01
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಪ್ರತಿನಿಧಿಗಳು ಸದಸ್ಯರು ಶ್ರೀ ಬಸವೇಶ್ವರ ದೇವಾಲಯದ ಆವರಣವನ್ನು ಸೋಮವಾರ ಸ್ವಚ್ಛಗೊಳಿಸಿದರು.
Published on

ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುಡ್ಡೆಹೊಸೂರು ವಲಯದ ಕೊಡಗರಹಳ್ಳಿ ಕಾರ್ಯಕ್ಷೇತ್ರದ ವತಿಯಿಂದ ಸ್ವ ಸಹಾಯ ಸಂಘಗಳ ಸದಸ್ಯರು ತೊಡಂಡೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಸೋಮವಾರ ಬೆಳೆದಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದರು.

ಗುಡ್ಡೆಹೊಸೂರು ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗರಹಳ್ಳಿ ಕಾರ್ಯಕ್ಷೇತ್ರದ ವತಿಯಿಂದ ಶೃದಾ ್ಧಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಶಿವನ್, ವಲಯ ಮೇಲ್ವಿಚಾರಕರಾದ ಯತೀಶ್, ಒಕ್ಕೂಟದ ಅಧ್ಯಕ್ಷೆ ಸುಜಾತಾ ಜೋತೆ, ಕಾರ್ಯದರ್ಶಿ ಶೋಭಾ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗರಹಳ್ಳಿ ಕಾರ್ಯಕ್ಷೇತ್ರದ ತೊಂಡೂರು ವ್ಯಾಪ್ತಿಯ ಸ್ವಸಹಾಯ ಸಂಘದ ಸದಸ್ಯರು ಆವರಣದಲ್ಲಿ ಬೆಳೆದಿದ್ದ ಗಿಡಗಂಟಿ, ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ಸೇರಿದಂತೆ ದೇವಾಲಯದ ಒಳಾಂಗಣವನ್ನು ಶುಭ್ರಗೊಳಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೃದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯ ಹಾಗೂ ಶ್ರಮದಾನವನ್ನು ನೇರವೇರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗರಹಳ್ಳಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಹೇಮಾವತಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net