ಬೂತ್‌ಮಟ್ಟದಿಂದ ಮಹಿಳಾ ಸದಸ್ಯತ್ವ ನೋಂದಣಿಯಾಗಲಿ

Dbp 3
ದೊಡ್ಡಬಳ್ಳಾಪುರದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಮತ್ತು ಸದಸ್ಯತ್ವ ಅಭಿಯಾನಕ್ಕೆ ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ಮಂಜಳಾ ಚಾಲನೆ ನೀಡಿದರು.
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ದೇಶವನ್ನು ಪ್ರಗತಿ ಪಥದಲ್ಲಿ ಮುನ್ನಡೆಸಲು ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಬಿಜೆಪಿಗೆ ಶಕ್ತಿ ತುಂಬಲು ಬೂತ್‌ಮಟ್ಟದಿಂದ ಮಹಿಳಾ ಸದಸ್ಯತ್ವ ಹೆಚ್ಚಾಗಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ಮಂಜುಳಾ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಮತ್ತು ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿ, ಕೇಂದ್ರದಲ್ಲಿ ಹತ್ತು ವರ್ಷಗಳ ನರೇಂದ್ರ ಮೋದಿ ಅವರ ಆಳ್ವಿಕೆಯಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದ ಹಲವು ಯೋಜನೆಗಳಿಂದ ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಶಾಸನ ಸಭೆಯಲ್ಲಿ ಶೇ.33, ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ಮೀಸಲಾತಿಯಿಂದಾಗಿ ಮಹಿಳೆಯರು ಆಡಳಿತದ ಎಲ್ಲ ಹಂತಗಳಲ್ಲೂ ಮುಖ್ಯವಾಹಿನಿಗೆ ಬರಲು ಅವಕಾಶ ಸಿಗಲಿದೆ. ಬೂತ್‌ಮಟ್ಟದಲ್ಲಿ ಕನಿಷ್ಠ 150 ರಿಂದ 200 ಸದಸ್ಯತ್ವ ಮಾಡಲೇಬೇಕಿದೆ. ಹೆಚ್ಚು ಸದಸ್ಯತ್ವ ಹೊಂದಿದರೆ ಪಕ್ಷ ಸದೃಢವಾಗಿ ಅಧಿಕಾರಕ್ಕೆ ಬರಲು ಸಾಧ್ಯವಾಗಲಿದೆ ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ 1 ಕೋಟಿ ಸದಸ್ಯತ್ವದ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ 4 ವಿಧಾನಸಭಾ ಕ್ಷೇತ್ರ, 6 ಮಂಡಲದಿಂದ 4 ಲಕ್ಷ ಗುರಿ ಹೊಂದಲಾಗಿದೆ. ಕಾರ್ಯಕರ್ತರು ಹೆಚ್ಚಿನ ಸದಸ್ಯತ್ವ ಮಾಡಿಸಿ, ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net