ದೇಶದ ಪ್ರಗತಿಗಾಗಿ ಸದಸ್ಯತ್ವ ಅಭಿಯಾನ

BJP SADASYA
Published on

ಭಟ್ಕಳ: ದೇಶವನ್ನು ಪ್ರಗತಿ ಪಥದಲ್ಲಿ ಮುನ್ನಡೆಸಲು ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.

ಮುರ್ಡೇಶ್ವರದ ಮಾವಳ್ಳಿ ಮಹಾ ಶಕ್ತಿಕೇಂದ್ರದ ಕಾಯ್ಕಣಿ ಶಕ್ತಿಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಮಾತನಾಡಿದರು.

ಭಟ್ಕಳ ಮಂಡಲದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಈಶ್ವರ ನಾಯ್ಕ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ, ಮಾವಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದೇವೇಂದ್ರ ನಾಯ್ಕ, ಕಾಯ್ಕಿಣಿ ಶಕ್ತಿ ಕೇಂದ್ರದ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಮಂಡಲ ಉಪಾಧ್ಯಕ್ಷ ಮಂಜಪ್ಪ, ಗಣಪತಿ ದೇವಾಡಿಗ, ಕಾರ್ಯದರ್ಶಿ ರಾಘವೇಂದ್ರ ನಾಯ್ಕ, ಹಿಂದುಳಿದ ಮೋರ್ಚಾ ಅಧ್ಯಕ್ಷ ಉಮೇಶ ನಾಯ್ಕ, ಮಹಿಳಾ ಮೋರ್ಚಾದ ಕುಪ್ಪಾ ಗೊಂಡ, ವಿಜಯಾ ನಾಯ್ಕ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net