ಸದಸ್ಯತ್ವ ಅಭಿಯಾನ ಆರಂಭಿಸಲು ಚರ್ಚೆ

010201
Published on

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆಯ ಜಿಲ್ಲಾ ಘಟಕದ ಸಭೆ ಭಾನುವಾರ ಜರುಗಿತು. ಸಭೆಯಲ್ಲಿ ಮಹಾಸಭಾದ ಸಂಘಟನೆ ಮತ್ತು ಮೀಸಲಾತಿಯ ಒಬಿಸಿ ಪಟ್ಟಿಗೆ ಸೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದು ಮತ್ತು ಸಂಘಟನೆಗಾಗಿ ಸದಸ್ಯತ್ವ ಅಭಿಯಾನದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.

ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಮಹಾಂತೇಶ ಪಾಟೀಲ ಮಾತನಾಡಿದರು. ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಕ್ಕ ಬೆಲ್ಲದ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಚೇತನ ಅಂಗಡಿ, ಸಚಿನ್ ಹಿರೇಮಠ, ಸವಿತಾ ತಿಗಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net