

ಚಿಕ್ಕೋಡಿ: ಬಿಜೆಪಿ ಸದಸ್ಯರು ಸಕ್ರಿಯರಾಗಿ ಹೆಚ್ಚು ಸದಸ್ಯತ್ವ ಮಾಡುವ ಮೂಲಕ ಅಭಿಯಾನ ಯಶಸ್ವಿಗೊಳಿಸಲು ಶ್ರಮಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಪಕ್ಷದ ಸಕ್ರಿಯ ಸದಸ್ಯರಾಗಿ ಸೋಮವಾರ ಸದಸ್ಯತ್ವಕ್ಕೆ ನೋಂದಣಿ ಮಾಡಿಕೊಂಡು ಮಾತನಾಡಿ, ಬಿಜೆಪಿ ಪ್ರತಿ ಆರು ವರ್ಷಗಳಿಗೊಮ್ಮೆ ಹೊಸ ಸದಸ್ಯತ್ವ ಅಭಿಯಾನ ಪ್ರಾರಂಭಿಸುತ್ತದೆ. ಪ್ರತಿಯೊಬ್ಬರೂ ನೋಂದಣಿ ಮಾಡಿಕೊಳ್ಳುವ ಮೂಲಕ ಬಿಜೆಪಿ ಸದಸ್ಯರಾಗಬೇಕು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಶಾಂಭವಿ ಅಶ್ವಥಪೂರ, ಮಂಡಳ ಅಧ್ಯಕ್ಷೆ ಶಕುಂತಲಾ ಡೋನವಾಡೆ, ಬಿಜೆಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮೃತಾ ಕುಲಕರ್ಣಿ, ಪುರಸಭೆ ಸದಸ್ಯ ಸಂಜಯ ಕವಟಗಿಮಠ ಇತರರು ಇದ್ದರು.